ರಾಜ್ಯ

ಐಟಿ ದಾಳಿಯ ಶಂಕೆ ಇತ್ತು, ಆದರೆ ಆತಂಕವಿಲ್ಲ. ಎಲ್ಲ ದಾಖಲೆಗಳೂ ಸರಿಯಾಗಿವೆ: ಸಚಿವ ಪುಟ್ಟರಾಜು

ಇದು ರಾಜಕೀಯ ಪ್ರೇರಿತ ಐಟಿ ದಾಳಿಯಾಗಿದ್ದು, ಐಟಿ ದಾಳಿಯ ಕುರಿತು ಮೊದಲೇ ಶಂಕೆ ಇತ್ತು.. ಆದರೂ ಇದಕ್ಕೆ ಹೆದರುವ ಅಗತ್ಯವಿಲ್ಲ ಎಲ್ಲ ದಾಖಲೆಗಳೂ ಸರಿಯಾಗಿವೆ ಎಂದು ಸಚಿವ ಸಿಎಸ್ ಪುಟ್ಟರಾಜು ಹೇಳಿದ್ದಾರೆ.

ಐಟಿ ದಾಳಿಯ ಶಂಕೆ ಇತ್ತು, ಆದರೆ ಆತಂಕವಿಲ್ಲ. ಎಲ್ಲ ದಾಖಲೆಗಳೂ ಸರಿಯಾಗಿವೆ: ಸಚಿವ ಪುಟ್ಟರಾಜು
ಸಂಗ್ರಹ ಚಿತ್ರ
Published On :
ಮೈಸೂರು: ಇದು ರಾಜಕೀಯ ಪ್ರೇರಿತ ಐಟಿ ದಾಳಿಯಾಗಿದ್ದು, ಐಟಿ ದಾಳಿಯ ಕುರಿತು ಮೊದಲೇ ಶಂಕೆ ಇತ್ತು.. ಆದರೂ ಇದಕ್ಕೆ ಹೆದರುವ ಅಗತ್ಯವಿಲ್ಲ ಎಲ್ಲ ದಾಖಲೆಗಳೂ ಸರಿಯಾಗಿವೆ ಎಂದು ಸಚಿವ ಸಿಎಸ್ ಪುಟ್ಟರಾಜು ಹೇಳಿದ್ದಾರೆ.
ಗುರುವಾರ ಮುಂಜಾನೆ ಸಿಎಸ್ ಪುಟ್ಟರಾಜು ಅವರ ಸಂಬಂಧಿಗಳ ನಿವಾಸದ ಮೇಲೆ ಐಟಿ ಆಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪುಟ್ಟರಾಜು ಸ್ವಗ್ರಾಮ ಮೈಸೂರಿನ ಚಿನಕುರಳಿಯಲ್ಲಿರುವ ಮನೆ ಮೇಲೆ ಬೆಳಗ್ಗೆ ಐಟಿ ದಾಳಿ ನಡೆದಿದ್ದು, ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅಣ್ಣನ ಮಗ ಅಶೋಕ್ ಮನೆ ಮೇಲೆಯೂ ದಾಳಿ ನಡೆದಿದೆ. ನಸುಕಿನ ಜಾವದಿಂದ ಪುಟ್ಟರಾಜು ನಿವಾಸ, ಸಂಬಂಧಿಗಳ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಐಟಿ ದಾಳಿಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪುಟ್ಟರಾಜು ಅವರು, ಐಟಿ ದಾಳಿಗೆ ಹೆದರುವ ಅಗತ್ಯವಿಲ್ಲ. ಇದು ರಾಜಕೀಯ ಪ್ರೇರಿತ ಐಟಿ ದಾಳಿಯಾಗಿದ್ದು, ಐಟಿ ದಾಳಿಯ ಕುರಿತು ಮೊದಲೇ ಶಂಕೆ ಇತ್ತು.. ಆದರೂ ಇದಕ್ಕೆ ಹೆದರುವ ಅಗತ್ಯವಿಲ್ಲ ಎಲ್ಲ ದಾಖಲೆಗಳೂ ಸರಿಯಾಗಿವೆ ಎಂದು ಹೇಳಿದ್ದಾರೆ.
ಅಂತೆಯೇ ತಮ್ಮ ಕುಟುಂಬ ಹಲವು ಪರ್ಷಗಳಿಂದ ಉದ್ಯಮದಲ್ಲಿ ತೊಡಗಿದೆ. ಹೀಗಾಗಿ ನಮ್ಮ ಯಾವುದೇ ವ್ಯವಹಾರಕ್ಕೂ ಎಲ್ಲ ರೀತಿಯ ದಾಖಲೆಗಳನ್ನು ಹೊಂದಿರುತ್ತೇವೆ ಎಂದು ಪುಟ್ಟರಾಜು ಹೇಳಿದ್ದಾರೆ.
'ನಾವು ರೈತಾಪಿ ಕುಟುಂಬದವರು. ಐಟಿಯವರು ದಾಳಿ ನಡೆಸಿದರೂ ನಮ್ಮ ಮನೆಯಲ್ಲಿ ಏನು ಸಿಗುವುದಿಲ್ಲ. ನಮ್ಮ ಎಲ್ಲ ವ್ಯವಹಾರಗಳಿಗೆ ಲೆಕ್ಕವಿದೆ. ಇವತ್ತು ಬೆಳಗ್ಗೆ 5:30ಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ನನಗೆ 10 ರೂ. ಬಂದರೂ ಅದಕ್ಕೂ ಲೆಕ್ಕ ಇದೆ. 1985 ರಿಂದಲೂ ನಾವು ಈ ವಿಚಾರದಲ್ಲಿ ಪಕ್ಕಾ ಇದ್ದೇವೆ. ಹೆದರುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ನಾಯಕರು, ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಯಲಿದೆ ಎನ್ನುವ ಮಾಹಿತಿ ಇತ್ತು. ಆದರೆ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವನ ಮನೆ ಮೇಲೆ ದಾಳಿ ನಡೆಯುತ್ತದೆ ಎಂದು ಭಾವಿಸಿರಲಿಲ್ಲ ಎಂದರು.

ಅಂತೆಯೇ ಚುನಾವಣೆ ಸಮಯದಲ್ಲಿ ದಾಳಿ ನಡೆಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಬೇಕು. ಈ ದಾಳಿಯಿಂದ ಕೆಲಸ ಮಾಡಲು ಮತ್ತಷ್ಟು ಉತ್ಸಾಹ ಬಂದಿದೆ. ಇಂದು ನಾನು ಚುನಾವಣಾ ಪ್ರಚಾರಕ್ಕೆ ತೆರಳುತ್ತೇನೆ. ನಾನು ಸಿಎಂ ಆಪ್ತ ಎನ್ನುವ ಕಾರಣಕ್ಕೆ ದಾಳಿ ಮಾಡಿದ್ದಾರೆ. ಬಿಜೆಪಿ ನಾಯಕರ ಮನೆಯಲ್ಲಿ ನೋಟು ಎಣಿಸುವ ಯಂತ್ರಗಳಿದ್ದರೂ ಯಾಕೆ ದಾಳಿ ಮಾಡುತ್ತಿಲ್ಲ. ಈ ರೀತಿ ದಾಳಿ ನಡೆಸಿ ನಮ್ಮನ್ನು ಕುಗ್ಗಿಸಲು ಸಾಧ್ಯವಿಲ್ಲ'' ಎಂದು ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.