ಕುಶಾಲನಗರ: ಭಾರೀ ಪ್ರಮಾಣದ ಸ್ಫೋಟಕ ವಶ, ಐವರ ಬಂಧನ
ಐವರು ಆರೋಪಿಗಳನ್ನು ಬಂಧಿಸಿರುವ ಕುಶಾಲನಗರ ಪೊಲೀಸರು ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶ ಪಡಿಸಿಕೊಂಡಿದ್ದಾರೆ....

Published On :
ಮಡಿಕೇರಿ: ಐವರು ಆರೋಪಿಗಳನ್ನು ಬಂಧಿಸಿರುವ ಕುಶಾಲನಗರ ಪೊಲೀಸರು ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶ ಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಶಾಲನಗರ ಗ್ರಾಮೀಣ ಪೊಲೀಸರು ಸುಂದರನಗರದ ಮಂಜು ಎಂಬಾತನ ಮನೆಯಲ್ಲಿ 21 ಎಲೆಕ್ಟ್ರಿಕಲ್ ಡಿಟೋನೇಟರ್ 200 ನಾನ್ ಎಲೆಕ್ಟ್ರಿಕಲ್ ಡಿಟೋನೇಟರ್ 239 ಅಮೋನಿಯಂ ನೈಟ್ರೇಟ್ ಟ್ಯೂಬ್ ಹಾಗೂ 5 ಕೆಜಿ ಕ್ಯಾಲ್ಸಿಯಂ ಹೈಡ್ರಾಕ್ಸೈಡ್ ವಶ ಪಡಿಸಿಕೊಂಡಿದ್ದಾರೆ.
ಇದರ ಜೊತೆಗೆ ಸುಂದರನಗರದ ಕೂಲಿ ಕಾರ್ಮಿಕ ಆರ್.ಮಂಜು, ಕುಬೇರ, ಮಣಿ, ರವಿ ಅಲಿಯಾಸ್ ರವಿಚಂದ್ರ, ರಿಜ್ವಾನ್ ಅಹ್ಮನ್ ಎಂಬುವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


