ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಓಕಾ ನೇಮಕ
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

Published On :
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ಓಕಾ ಅವರನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಕಾನೂನು ಸಚಿವಾಲಯ ಹಾಗೂ ರಾಷ್ಟ್ರಪತಿ ಭವನಕ್ಕೆ ಶಿಫಾರಸು ಮಾಡಿತ್ತು.
ಕೊಲಿಜಿಯಂ ಶಿಪಾರಸನ್ನು ಮಾನ್ಯ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳವಾರ ಓಕಾ ಅವರ ನೇಮಕಕ್ಕಾಗಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ಈ ಹಿಂದಿನ ಸಿಜೆ ದಿನೇಶ್ ಮಹೇಶ್ವರಿ ಜ.15ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಭಡ್ತಿ ಪಡೆದಿದ್ದರು. ನಂತರ ಎಲ್. ನಾರಾಯಣಸ್ವಾಮಿ ಹಂಗಾಮಿ ಸಿಜೆ ಆಗಿ ಅಧಿಕಾರ ವಹಿಸಿಕೊಂಡಿದ್ದರು.
ಓಕಾ ಅವರು 1960ರ ಮೇ 25ರಂದು ಜನಿಸಿದ್ದು ಬಾಂಬೆ ಯೂನಿವರ್ಸಿಟಿಯಲ್ಲಿ ಕಾನೂನು ಹಾಗೂ ಎಲ್ಎಲ್ಎಂ ಪದವಿ ಗಳಿಸಿದ್ದಾರೆ.ಇವರ ತಂದೆ ಶ್ರೀನಿವಾಸ ಓಕಾ ಸಹ ವಕೀಲರಾಗಿದ್ದು ಅವರ ಕೆಳಗೆ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದರು. . 2003ರಲ್ಲಿ ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದ ಅವರು 2005ರಿಂದ ಕಾಯಂ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


