ಫನಿ ಚಂಡಮಾರುತ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ
ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಂಡಮಾರುತ ಭೀಕರ ಸ್ವರೂಪ ಪಡೆಯುತ್ತಿರುವಂತೆಯೇ ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.

Published On :
ಬೆಂಗಳೂರು: ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಂಡಮಾರುತ ಭೀಕರ ಸ್ವರೂಪ ಪಡೆಯುತ್ತಿರುವಂತೆಯೇ ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.
ಫ್ಯಾನಿ ಚಂಡಮಾರುತದ ಪರಿಣಾಮ ತಮಿಳುನಾಡು, ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ನಿನ್ನೆ ಸಂಜೆ ಬೆಂಗಳೂರು, ಮೈಸೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಎಡಬಿಡದೆ ಮಳೆಯಾಗಿದೆ. ಬೆಂಗಳೂರಿನ ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ಮೆಜೆಸ್ಟಿಕ್, ಬಸವನಗುಡಿ, ಜಯನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.
ಇನ್ನು ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೆ ಹಲವು ಪ್ರದೇಶಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ವಿದ್ಯುತ್ ವ್ಯತ್ಯಯವಾಗಿತ್ತು. ಇನ್ನೆರಡು ದಿನಗಳ ಕಾಲ ಚಂಡಮಾರುತದಿಂದ ರಾಜ್ಯದಲ್ಲಿ ಮಳೆ ಸೃಷ್ಟಿಯಾಗುವ ನಿರೀಕ್ಷೆ ಇದೆ. ಮೇ 3ರಂದು ಫ್ಯಾನಿ ಚಂಡಮಾರುತ ಒಡಿಶಾ ಕಡಲ ತೀರ ಪ್ರದೇಶ ಹಾದು ಹೋಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


