ಗೃಹ ಸಚಿವರ ಹೆಸರಿನಲ್ಲಿ ನಕಲಿ ಪತ್ರ: ಪತ್ರಕರ್ತ ಹೇಮಂತ್ ಕುಮಾರ್ ಗೆ ಷರತ್ತುಬದ್ಧ ಜಾಮೀನು
ಪ್ರತ್ಯೇಕ ಲಿಂಗಾಯತ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪದಡಿ...

Published On :
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಪತ್ರಕರ್ತ ಹೇಮಂತ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, 50 ಸಾವಿರ ರೂ. ಮೊತ್ತದ ವೈಯಕ್ತಿಕ ಬಾಂಡ್, 50 ಸಾವಿರ ರೂ. ಮೊತ್ತದ ಶ್ಯೂರಿಟಿ ಸಲ್ಲಿಸುವಂತೆ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಹೇಮಂತ್ ಕುಮಾರ್ ಅವರು ತಮ್ಮ ಹೆಸರಿನಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನಕಲಿ ಪತ್ರ ಬರೆದಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಎಂ.ಬಿ.ಪಾಟೀಲ್ ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಸಂಬಂಧ ಪೊಲೀಸರು 'ಪೋಸ್ಟ್ ಕಾರ್ಡ್' ವೆಬ್ ಪೋರ್ಟಲ್ ಸಂಪಾದಕ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಿದ್ದರು. ಅವರ ವಿಚಾರಣೆ ವೇಳೆ ದೊರೆತ ಮಾಹಿತಿ ಆಧರಿಸಿ, ಪತ್ರಕರ್ತ ಹೇಮಂತ್ ಕುಮಾರ್ ಅನ್ನು ಬಂಧಿಸಿದ್ದರು. ನ್ಯಾಯಾಲಯ ಹೇಮಂತ್ ಅವರನ್ನು ಏ.30ರವರೆಗೆ ಪೊಲೀಸ್ ಕಸ್ಟಡಿಗೆ ಹಾಗೂ ನಂತರ, ಮೇ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


