ರಾಜ್ಯ

ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರ ಆತ್ಮಹತ್ಯೆ

ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :
ದೊಡ್ಡಬಳ್ಳಾಪುರ: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡ ಬಳ್ಳಾಪುರದ ವೀರಾಪುರದಲ್ಲಿ ಈ ಘಟನೆ ನಡೆದಿದ್ದು, ದೊಡ್ಡಬಳ್ಳಾಪುರ ನಗರದ ಕಚೇರಿಪಾಳ್ಯ ನಿವಾಸಿಗಳಾದ ಲಕ್ಷ್ಮೀಪತಿ ಮತ್ತು ಶಾಂತಿನಗರ ಮೂಲದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೀರಾಪುರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಕ್ಷ್ಮೀಪತಿ ಮತ್ತು ಯುವತಿ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಮದುವೆಗೆ ಮನೆಯವರ ವಿರೋಧ ಇರಬಹುದು ಎಂದು ಆತಂಕಗೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ದೊಡ್ಡಬಳ್ಳಾಫುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.