ಕಾರವಾರ: ತ್ರಿಭುಜ ಬೋಟ್ನ ಅವಶೇಷಗಳ ಫೋಟೋ ಬಿಡುಗಡೆ ಮಾಡಿದ ನೌಕಾಪಡೆ
ಏಳು ಮೀನುಗಾರರ ಸಹಿತ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್ನ ಅವಶೇಷಗಳು 140 ದಿನಗಳ ಬಳಿಕ ಮಹಾರಾಷ್ಟ್ರದ ಮಾಲ್ವಾನ್ ಪ್ರದೇಶದ

Published On :
ಕಾರವಾರ: ಏಳು ಮೀನುಗಾರರ ಸಹಿತ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್ನ ಅವಶೇಷಗಳು 140 ದಿನಗಳ ಬಳಿಕ ಮಹಾರಾಷ್ಟ್ರದ ಮಾಲ್ವಾನ್ ಪ್ರದೇಶದ ಸಮುದ್ರದ ಆಳದಲ್ಲಿ ಪತ್ತೆಯಾಗಿದ್ದು, ಭಾರತೀಯ ನೌಕಾಪಡೆ ಅದರ ಚಿತ್ರಗಳನ್ನು ಗುರುವಾರ ಬಿಡುಗಡೆ ಮಾಡಿದೆ.
ಡಿಸೆಂಬರ್ 15ರಂದು ಮಲ್ಪೆಯಿಂದ ಹೊರಟಿದ್ದ ಬೋಟ್, ತಿಂಗಳುಗಳೇ ಕಳೆದರೂ ಪತ್ತೆಯಾಗಿರಲಿಲ್ಲ. ಹೀಗಾಗಿ ನೌಕಾಪಡೆ ಸಹಾಯ ಪಡೆದು ಶೋಧ ಕಾರ್ಯ ನಡೆಸಿದಾಗ ಮೇ 3ರಂದು ಮಾಲ್ವಾನ್ ಬಳಿ ಅದರ ಅವಶೇಷಗಳು ಪತ್ತೆಯಾಗಿದ್ದವು.
ಮಾಲ್ವಾನ್ ವ್ಯಾಪ್ತಿಯ 30 ಕಿ.ಮೀ. ದೂರದಲ್ಲಿ 60 ಮೀಟರ್ ಆಳದಲ್ಲಿ ಬೋಟ್ನ ಅವಶೇಷ ಪತ್ತೆಯಾಗಿದೆ ಎಂದು ಕಾರವಾರ ನೇವಲ್ ಬೇಸ್ ಅಧಿಕಾರಿಗಳು ಉಡುಪಿ ಜಿಲ್ಲಾ ಪೊಲೀಸರಿಗೆ ಲಿಖಿತವಾಗಿ ಮಾಹಿತಿ ನೀಡಿದ್ದಾರೆ.
ಮೀನುಗಾರಿಕೆ ಬೋಟ್ ಅವಶೇಷಗಳು ಮಾತ್ರ ಪತ್ತೆಯಾಗಿದ್ದು, ಬೋಟ್ ನಲ್ಲಿದ್ದ ಏಳು ಮೀನುಗಾರರ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


