ರಾಜ್ಯ

ಅರ್ಕಾವತಿ ಲೇ ಔಟ್ ಹಗರಣ; ಬಿಡಿಎಯ 7 ಸಿಬ್ಬಂದಿ ವಜಾ

ಅರ್ಕಾವತಿ ಲೇ ಔಟ್ ನಲ್ಲಿ ಮನಸೋ ಇಚ್ಛೆ ದರಕ್ಕೆ ಹಲವು ನಿವೇಶನಗಳನ್ನು ಮಾರಾಟ ಮಾಡಿದ್ದಕ್ಕೆ ...

ಅರ್ಕಾವತಿ ಲೇ ಔಟ್ ಹಗರಣ; ಬಿಡಿಎಯ 7 ಸಿಬ್ಬಂದಿ ವಜಾ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಅರ್ಕಾವತಿ ಲೇ ಔಟ್ ನಲ್ಲಿ ಮನಸೋ ಇಚ್ಛೆ ದರಕ್ಕೆ ಹಲವು ನಿವೇಶನಗಳನ್ನು ಮಾರಾಟ ಮಾಡಿದ್ದಕ್ಕೆ ಮೂವರು ಕೆಎಎಸ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿ ಮತ್ತು ಆಡಳಿತಾತ್ಮಕ ಸುಧಾರಣೆ ಇಲಾಖೆಗೆ ಪತ್ರ ಬರೆದಿದೆ.
ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಿಡಿಎ ಕೂಡ ನಾಲ್ವರು ಕೇಸ್ ವರ್ಕರ್ಸ್ ಮತ್ತು ಮೂವರು ಮೇಲ್ವಿಚಾರಕರನ್ನು ಸೇವೆಯಿಂದ ವಜಾಗೊಳಿಸಿದೆ.
ಬಿಡಿಎ ಕಾರ್ಯಪಡೆಯ ಸೂಪರಿಂಟೆಂಡೆಂಟ್ ತಮ್ಮ ತನಿಖಾ ವರದಿಯನ್ನು ಬಿಡಿಎ ಕಾರ್ಯದರ್ಶಿಗಳು ಮತ್ತು ಆಯುಕ್ತರಿಗೆ ಇತ್ತೀಚೆಗೆ ಸಲ್ಲಿಸಿದ್ದರು.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, ಈ ಹಗರಣದಿಂದ ಬಿಡಿಎಗೆ ಸುಮಾರು 35 ಕೋಟಿ ರೂಪಾಯಿ ನಷ್ಟವಾಗಿದೆ. ಹಗರಣ ಬೆಳಕಿಗೆ ಬಂದ ಸಮಯದಲ್ಲಿ 10ರಿಂದ 15 ಕೋಟಿ ರೂಪಾಯಿ ನಷ್ಟವಾಗಿತ್ತು ಎಂದು ಹೇಳಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.