ನಿಖಿಲ್ ಆಯ್ತು, ಈಗ ಅನಿತಕ್ಕ ಎಲ್ಲಿದ್ದಾರೆ? ಟ್ರೋಲ್
ಸಾಮಾಜಿಕ ಜಾಲತಾಣಗಳಲ್ಲಿ ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬುದು ಸಖತ್ ಟ್ರೋಲ್ ಆಗಿತ್ತು. ಆದರೆ, ಈಗ ನಿಖಿಲ್ ಅವರ ತಾಯಿ ಅನಿತಾ ಕುಮಾರಸ್ವಾಮಿ ಎಲ್ಲಿದ್ದಾರೆ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬುದು ಸಖತ್ ಟ್ರೋಲ್ ಆಗಿತ್ತು. ಆದರೆ, ಈಗ ನಿಖಿಲ್ ಅವರ ತಾಯಿ ಅನಿತಾ ಕುಮಾರಸ್ವಾಮಿ ಎಲ್ಲಿದ್ದಾರೆ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ರೇಷ್ಮೆ ನಗರಿ ಖ್ಯಾತಿಯ ರಾಮನಗರದಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಜನರ ಸಮಸ್ಯೆಗಳಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಂದಿಸುತ್ತಿಲ್ಲ, ಕ್ಷೇತ್ರಕ್ಕೂ ಭೇಟಿ ನೀಡುತ್ತಿಲ್ಲ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಇದಕ್ಕೆ ಬಳಸಿಕೊಂಡು ಬಿಜೆಪಿ ಕಾರ್ಯಕರ್ತರಾದ ರುದ್ರ ದೇವರು ಹಾಗೂ ವಿನೋದ್ ಭಗತ್ ಎಂಬುವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.
ಮೂರು ದಿನಕ್ಕೂ ನಾಲ್ಕು ದಿನಕ್ಕೊ ಮೋರಿ ನೀರು ಬಿಡುತ್ತಿದ್ರು, ಈಗ ಅದನ್ನು ಬಿಡುತ್ತಿಲ್ಲ, ನಲ್ಲಿಯಲ್ಲಿ 15 ದಿನಗಳಾದರೂ ನೀರು ಬರುತ್ತಿಲ್ಲ, ಶಾಸಕರಾದ ಅನಿತಕ್ಕೆ ಯಾವಾಗ ಸಮಸ್ಯೆ ಬಗೆಹರಿಸುತ್ತಾರೋ ಗೊತ್ತಿಲ್ಲ, ಅನಿತಾಕ್ಕೆ ಎಲ್ಲಿದ್ದೀರಿ ಎಂದು ವಿಡಿಯೋದಲ್ಲಿ ಕೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


