ಸುವರ್ಣ ತ್ರಿಭುಜ ದೋಣಿ ದುರಂತ: ನಾಪತ್ತೆಯಾದ ಮೀನುಗಾರನ ಸಹೋದರ ಆತ್ಮಹತ್ಯೆ
ಮಲ್ಪೆ ಬಂದರಿನಿಂದ ಮೀನಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ದೋಣಿ ಅವಘಡದಲ್ಲಿ ನಾಪತ್ತೆಯಾದ ಸಹೋದರನ ಚಿಂತೆಯಲ್ಲಿ ವಿಷ ಸೇವಿಸಿ...

Published On :
ಉಡುಪಿ: ಮಲ್ಪೆ ಬಂದರಿನಿಂದ ಮೀನಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ದೋಣಿ ಅವಘಡದಲ್ಲಿ ನಾಪತ್ತೆಯಾದ ಸಹೋದರನ ಚಿಂತೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಟ್ಕಳ ನಿವಾಸಿ ಚಂದ್ರಶೇಖರ್ ಮೊಗೇರ(30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಮೀನುಗಾರರಲ್ಲಿ ಓರ್ವನಾದ ಭಟ್ಕಳದ ನಿವಾಸಿ ರಮೇಶ್ ಮೊಗೇರ ಅವರ ಸಹೋದರ ಚಂದ್ರಶೇಖರ್ ನಾಲ್ಕು ದಿನಗಳ ಹಿಂದೆ ಸಹೋದರ ಪತ್ತೆಯಾಗದ ಹಿನ್ನೆಲೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ಚಂದ್ರಶೇಖರ್ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆತ್ಮಹತ್ಯೆDiesSuvarna Tribhuja tragedyMissing-fisherman\'s brotherಸುವರ್ಣ ತ್ರಿಭುಜ ದುರಂತನಾಪತ್ತೆಯಾದ ಮೀನುಗಾರನ ಸಹೋದರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


