ನೀರಿನ ಕೊರತೆ: ಧರ್ಮಸ್ಥಳ ಪ್ರವಾಸ ಮುಂದೂಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ನೀರಿನ ಅಭಾವ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಿಗೂ ಬಿಸಿ ಮುಟ್ಟಿಸಿದೆ.

Published On :
ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ನೀರಿನ ಅಭಾವ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಿಗೂ ಬಿಸಿ ಮುಟ್ಟಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳು ಕೆಲವು ದಿನಗಳ ಮಟ್ಟಿಗೆ ತಮ್ಮ ಯಾತ್ರೆಯನ್ನು ಮುಂದೂಡುವಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹಗ್ಗಡೆ ಅವರು ಮನವಿ ಮಾಡಿದ್ದಾರೆ.

ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಭಕ್ತರಿಗೆ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನೀರಿನ ಅಭಾವ ಉಂಟಾಗಿದೆ, ಇನ್ನೂ ದೇವಸ್ಥಾನದ ವಸತಿ ಗೃಹಗಳಿಗೂ ಹೆಚ್ಚಿನ ನೀರು ಖರ್ಚಾಗುತ್ತದೆ. ಈಗ ನೀರಿನ ಅಭಾವ ಇರುವುದರಿಂದ ಧರ್ಮಸ್ಥಳ ಯಾತ್ರಿಕರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಡಾ. ಹೆಗ್ಗಡೆಯವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಧರ್ಮಸ್ಥಳPilgrimsವಿರೇಂದ್ರ ಹೆಗ್ಗಡೆಭಕ್ತಾದಿಗಳುನೀರಿನ ಕೊರತೆDr.Veerendra HeggadeDharmastalaWater shortage crisis
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


