ರಾಜ್ಯ

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು

ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ...

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು
ಸಾಂದರ್ಭಿಕ ಚಿತ್ರ
Published On :
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಇವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.
ಮಕ್ಕಳನ್ನು ಕಳೆದುಕೊಂಡ  ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.