ಮಂಡ್ಯ: ಸುಮಲತಾ ಅಂಬರೀಷ್ ಜಯಭೇರಿ, ನಿಖಿಲ್ ಎಲ್ಲೀದ್ದಿಯಪ್ಪಾ? ಬಿಜೆಪಿ ವ್ಯಂಗ್ಯ
ಕರ್ನಾಟಕ ಬಿಜೆಪಿ ಟ್ವಿಟರ್ ಪುಟದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಹೇಳುವ ಮೂಲಕ ವ್ಯಂಗ್ಯವಾಡಲಾಗಿದೆ. ಇದಕ್ಕೆ ಬಿಜೆಪಿ ಅಭಿಮಾನಿಗಳು ಟ್ರೋಲ್ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದ್ದಾರೆ.

ಮಂಡ್ಯ: ಲೋಕಸಭಾ ಚುನಾವಣೆ ಆರಂಭದಿಂದಲೂ ರಾಷ್ಟ್ರಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಸುಮಾರು 90 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಜೊತೆಗೆ ಆರಂಭದಿಂದಲೂ ತೀವ್ರ ಪೈಪೋಟಿ ನೀಡಿದ ಸುಮಲತಾ ಅಂಬರೀಷ್ ಕೊನೆಗೆ ಗೆಲುವಿನ ಜಯಮಾಲೆ ಹಾಕಿಕೊಂಡಿದ್ದಾರೆ. ಈ ಗೆಲುವಿನಿಂದಾಗಿ ಸುಮಲತಾ ಅಂಬರೀಷ್ ಬೆಂಬಲಿಗರು ಹಾಗೂ ಬಿಜೆಪಿ ಮುಖಂಡರು ಸಂತಸಗೊಂಡಿದ್ದು, ಜೆಡಿಎಸ್ ವಿರುದ್ಧ ವ್ಯಂಗ್ಯವಾಡುತ್ತಿದ್ದಾರೆ.
ಪ್ರಚಾರದ ವೇಳೆಯಲ್ಲಿ ನಿಖಿಲ್ ಎಲ್ಲೀದ್ದಿಯಪ್ಪಾ ? ಎಂಬುದು ತೀವ್ರ ಟ್ರೋಲ್ ಆಗಿತ್ತು. ಇದನ್ನ ಬಳಸಿಕೊಂಡು ಈಗ ಬಿಜೆಪಿ ಜೆಡಿಎಸ್ ನ್ನು ಟ್ರೋಲ್ ಮಾಡುತ್ತಿದೆ.
Nikhil Yellidiyappa ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


