'ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು'- ಸುಮಲತಾ ಅಂಬರೀಷ್
ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ , ಇದು ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು ಎಂದಿದ್ದಾರೆ.

Published On :
ಮಂಡ್ಯ: ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್ ಒಂದು ಲಕ್ಷದ ಹದಿನೈದು ಸಾವಿರ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಸುಮಲತಾ ಅವರ ಗೆಲುವಿನ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆಯಷ್ಟೆ ಬಾಕಿಯಿದೆ.
ಭಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ , ಇದು ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು ಎಂದಿದ್ದಾರೆ.
ತುಂಬಾ ದೊಡ್ಡ ಸಾಹಸ ಮಾಡಿದ್ದು, ಒಳ್ಳೇಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದೆ. ಈ ಹಾದಿಯಲ್ಲಿ ಚಿತ್ರೋದ್ಯಮದ ಗಣ್ಯರು, ರಾಜ್ಯದ ಜನತೆಯೇ ಬೆಂಬಲಿಸಿದ್ದು, ಅವರೆಲ್ಲರಿಗೂ ಚಿರಖುಣಿಯಾಗಿರುವುದಾಗಿ ಹೇಳಿದ್ದಾರೆ.
ಆರಂಭದಲ್ಲಿ ಹಿನ್ನೆಡೆಯಲ್ಲಿದ್ದರೂ ಮಧ್ಯಾಹ್ನದ ನಂತರ ಮುನ್ನಡೆ ಕಾಯ್ದುಕೊಂಡ ಸುಮಲತಾ ಅಂಬರೀಷ್ ಅವರಿಗೆ ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ಸಿಕ್ಕಿದೆ.
ಮಂಡ್ಯ ಕ್ಷೇತ್ರದ ಪ್ರಗತಿ ಹಾಗೂ ಸಮಸ್ಯೆಗಳ ನಿವಾರಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸದ್ಯದಲ್ಲೇ ಜನರ ಮುಂದೆ ವಿವರಿಸಲಿದ್ದೇನೆ” ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


