ಬೆಂಗಳೂರು: ಪತ್ನಿಯ ಕಾಟ ತಡೆಯಲಾರದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಪತ್ನಿಯ ಕಿರಿಕುಳ ತಡೆಯಲಾರದೇ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Published On :
ಬೆಂಗಳೂರು: ಪತ್ನಿಯ ಕಿರಿಕುಳ ತಡೆಯಲಾರದೇ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಂಜುನಾಥ ನಗರದ ನಿವಾಸಿ, ಚಾಲಕ ಶ್ರೀನಿವಾಸ್ ಎಸ್ ಮೃತಪಟ್ಟ ದುರ್ದೈವಿಯಾಗಿದ್ದು, ಮೃತಪಟ್ಟ ಹಲವು ದಿನಗಳ ಬಳಿಕ ಆತನ ಪಾರ್ಥಿವ ಶರೀರ ಪತ್ತೆಯಾಗಿದೆ.
ಚಾಲಕ ಬರೆದಿಟ್ಟಿದ್ದ ಪತ್ರದ ಆಧಾರದಲ್ಲಿ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದು, ಮಹಿಳೆ ಹಾಗೂ ಆಕೆಯ ತವರುಮನೆಯವರ ವಿರುದ್ಧ ಆತ್ಮಹೆತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣ ದಾಖಲಿಸಿದ್ದಾರೆ. ಮೃತ ಶ್ರೀನಿವಾಸ್ ಅವರ ಸಹೋದರ ರವೀಶ್ವರ.ಎಸ್ ನೀಡಿರುವ ಮಾಹಿತಿಯ ಪ್ರಕಾರ ಶ್ರೀನಿವಾಸ್ ಹಾಗೂ ಸುಮಾ ಅವರೊಟ್ಟಿಗೇ ಇದ್ದರು. ಶ್ರೀನಿವಾಸ್ ರಾತ್ರಿ ಮನೆಗೆ ತಡವಾಗಿ ಬರುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಆಗಾಗ್ಗೇ ಕಲಹ ಉಂಟಾಗುತ್ತಿತ್ತು. ಇದರಿಂದ ಬೇಸತ್ತಿದ್ದ ಸುಮಾ ತವರು ಮನೆಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾದ ನಂತರ ಸುಮಾ ಹಾಗೂ ಅವರ ತವರುಮನೆಯ ಸದಸ್ಯರು ಧರ್ಮಸ್ಥಳಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಶ್ರೀನಿವಾಸ್ ಅವರೊಂದಿಗೆ ಹೋಗುವುದಕ್ಕೆ ನಿರಾಕರಿಸಿದ್ದಾರೆ. ಈ ಸಂಬಂಧ ಇತ್ತೀಚೆಗಷ್ಟೇ ಕಲಹ ಉಂಟಾಗಿತ್ತು.
ಶ್ರೀನಿವಾಸ್ ರಾತ್ರಿ ಮನೆಗೆ ಬರುವುದು ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ಆತನಿಗೆ ಅಕ್ರಮ ಸಂಬಂಧವಿದೆ ಎಂದು ಪತ್ನಿ ಸುಮಾ ಅನುಮಾನ ಹೊಂದಿದ್ದಳು ಎಂದು ಮೃತನ ಸಹೋದರ ರವೀಶ್ವರ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


