ನಿಖಿಲ್ ರಂಪಾಟ: ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ಅವಾಸ್ತವಿಕ- ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಎದುರು ಸೋಲನು...

Published On :
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಎದುರು ಸೋಲನುಭವಿಸಿದ ಬೇಸರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮೈಸೂರಿನ ಹೋಟೆಲ್ ಒಂದರಲ್ಲಿ ರಂಪಾಟ ಮಾಡಿದ್ದರು ಎಂದು ಕನ್ನಡದ ದಿನಪತ್ರಿಕೆಯೊಂದರಲ್ಲಿ ಶನಿವಾರ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಕಪೋಲಕಲ್ಪಿತ ಎಂದು ಸ್ವತಃ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಟ್ಲೀಟ್ ಮಾಡಿರುವ ಅವರು, ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ. ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ. ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ," ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮೈಸೂರುHD KumaraswamyಜಗಳMysuruHotelಹೊಟೇಲ್ಸಿಎಂ ಹೆಚ್ ಡಿ ಕುಮಾರಸ್ವಾಮಿನಿಖಿಲ್ ಕುಮಾರಸ್ವಾಮಿNikhil KumaraswamyBrawl
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


