ದೇವೇಗೌಡ ಕುಟುಂಬದ ಕುರಿತು 'ಸುಳ್ಳು ಸುದ್ದಿ': ಕನ್ನಡ ದಿನಪತ್ರಿಕೆ ಸಂಪಾದಕರ ವಿರುದ್ಧ ಎಫ್ಐಆರ್
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಆರೋಪ ಮೇರೆಗೆ ಕನ್ನಡ ದಿನಪತ್ರಿಕೆ ಸಂಪಾದಕ ಹಾಗೂ ಸಂಪಾದಕೀಯ ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಆರೋಪ ಮೇರೆಗೆ ಕನ್ನಡ ದಿನಪತ್ರಿಕೆ ಸಂಪಾದಕ ಹಾಗೂ ಸಂಪಾದಕೀಯ ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ.
ದೇವೇಗೌಡ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ವಿಶ್ವವಾಣಿ ಪತ್ರಿಕೆ ಶನಿವಾರ ಸುಳ್ಳು ವರದಿಯನ್ನು ಪ್ರಕಟಿತ್ತು ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್. ಪಿ. ಪ್ರದೀಪ್ ಕುಮಾರ್ ದೂರು ಸಲ್ಲಿಸಿದ್ದಾರೆ.
ವಿಶ್ವವಾಣಿಯ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಸಂಪಾದಕೀಯ ಸಿಬ್ಬಂದಿ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ ) 499 ( ಮಾನನಷ್ಟ ) ಹಾಗೂ 406 ( ನಂಬಿಕೆಯ ಅಪರಾಧ ಉಲ್ಲಂಘನೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಹಿಳೆ ಎದುರು ಸೋಲಲು ನೀವೆ ಹೊಣೆ ಎಂದು ಆರೋಪಿಸಿ ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಜೊತೆಗೆ ಜಗಳ ಮಾಡಿದ್ದಾರೆ ಎಂದು ಸುಳ್ಳು ವರದಿ ಪ್ರಕಟಿಸಲಾಗಿತ್ತು ಎಂದು ಕುಮಾರ್ ಹೇಳಿದ್ದಾರೆ.
ಎಫ್ ಐಆರ್ ಕುರಿತಂತೆ ಪ್ರತಿಕ್ರಿಯಿಸಿರುವ ವಿಶ್ವೇಶ್ವರ್ ಭಟ್, ಮೂಲ ಆಧಾರದ ಮೇಲೆ ವರದಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾರಾದರೂ ಯಾವುದೇ ಆಕ್ಷೇಪಣೆ ಹೊಂದಿದ್ದಲ್ಲಿ, ಅವರು ಸ್ಪಷ್ಟನೆಗೆ ಆದೇಶ ಹೊರಡಿಸಬಹುದಿತ್ತು. ಕಳೆದ 19 ವರ್ಷಗಳಿಂದಲೂ ಸಂಪಾದಕನಾಗಿ ಕೆಲಸ ಮಾಡುತ್ತಿದ್ದೇನೆ. ಇಂತಹ ಘಟನೆ ಯಾವಾಗಲೂ ನಡೆದಿರಲಿಲ್ಲ ಎಂದು ಹೇಳಿದ್ದಾರೆ.
ಹೆಚ್ಚಿನ ರೀತಿಯ ಮಾನನಷ್ಟ ಮೊಕದ್ದಮೆ ದಾಖಲಿಸಬಹುದು. ಆದರೆ, ಉದ್ದೇಶಪೂರ್ವಕವಾಗಿ ಎಫ್ ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದಲ್ಲಿ ಎದುರಿಸುವುದಾಗಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


