ಮೋದಿ ಸಂಪುಟ ಸೇರಿದ ರಾಜ್ಯ ಸಂಸದರಿಗೆ ಶುಭ ಹಾರೈಸಿದ ಸಿಎಂ
ಪ್ರಧಾನಿ ಮೋದಿಯವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ನೇಮಕವಾಗಿರುವ ರಾಜ್ಯದ ನಾಲ್ವರು ನಾಯಕರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

Published On :
ಬೆಂಗಳೂರು: ಪ್ರಧಾನಿ ಮೋದಿಯವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ನೇಮಕವಾಗಿರುವ ರಾಜ್ಯದ ನಾಲ್ವರು ನಾಯಕರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
ಸಂಸದರಾದ ಡಿವಿ ಸದಾನಂದಗೌಡ, ನಿರ್ಮಲಾ ಸೀತಾರಾಮನ್, ಪ್ರಹ್ಲಾದ ಜೋಷಿ ಹಾಗೂ ಸುರೇಶ್ ಅಂಗಡಿ ಅವರುಗಳಿಗೆ ಸಿಎಂ ಕುಮಾರಸ್ವಾಮಿ ಶುಭ ಕೋರಿದ್ದಾರೆ.
"ರಾಜ್ಯದಿಂದ ಆಯ್ಕೆಯಾದ ಎಲ್ಲಾ ಸಂಸದರಿಗೆ ಶುಭಾಶಯಗಳು, ರಾಜ್ಯದ ಅಭಿವೃದ್ದಿಗಾಗಿ ಮೂವರೂ ಸಂಸದರು ಸರ್ಕಾರದೊಡನೆ ಸಹಕರಿಸುತ್ತೀರಿ ಎಂದು ಭಾವಿಸಿದ್ದೇನೆ" ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದ ಸದಾನಂದಗೌಡ, ಹುಬ್ಬಳ್ಳಿ-ಧಾರವಾಡದ ಪ್ರಹ್ಲಾದ್ ಜೋಷಿ ಹಾಗೂ ಬೆಳಗಾವಿ ಕ್ಷೇತ್ರದ ಸುರೇಶ್ ಅಂಗಡಿ ಅವರುಗಳು ಮೋದಿ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ನೇಮಕವಾಗಿದ್ದಾರೆ. ಇದಲ್ಲದೆ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಮಹತ್ವದ ಹಣಕಾಸು ಸಚಿವರಾಗಿ ನೇಮಕವಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Kumaraswamyಡಿ.ವಿ.ಸದಾನಂದ ಗೌಡSuresh Angadiಸುರೇಶ್ ಅಂಗಡಿmodi Cabinetಸಿಎಂ ಕುಮಾರಸ್ವಾಮಿಮೋದಿ ಕ್ಯಾಬಿನೆಟ್D. V. Sadananda Gowda
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


