ಮಾಜಿ ಸಚಿವ ಡಿಕೆ ಶಿವಕುಮಾರ್ ಅಪೊಲೊ ಆಸ್ಪತ್ರೆಗೆ ದಾಖಲು
ಬೆನ್ನುನೋವು ಮತ್ತು ತೀವ್ರ ಆಯಾಸದ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿಕೆ ಶಿಅಕುಮಾರ್ ಶುಕ್ರವಾರ ಸಂಜೆ 6: 30 ಕ್ಕೆ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ಬೆನ್ನುನೋವು ಮತ್ತು ತೀವ್ರ ಆಯಾಸದ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿಕೆ ಶಿಅಕುಮಾರ್ ಶುಕ್ರವಾರ ಸಂಜೆ 6: 30 ಕ್ಕೆ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಕೆಲ ಕಾಲ ವೈದ್ಯರ ಪರಿಶೀಲನೆಯಲ್ಲಿದ್ದ ಡಿಕೆಶಿ ಅವರನ್ನು ಸಧ್ಯ ಒಳರೋಗಿಗಳನ್ನಾಗಿ ದಾಖಲು ಮಾಡಿಕೊಳ್ಳಲಾಗಿದೆ.
ಇದಕ್ಕೆ ಕೆಲ ದಿನಗಳ ಹಿಂದೆ ಶಿವಕುಮಾರ್ ನವದೆಹಲಿಯ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾಗ, ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಅಲ್ಲಿ ಅವರು ಎದೆ ನೋವು ಮತ್ತು ಅಸ್ವಸ್ಥತೆ ಕುರಿತು ದೂರು ಹೇಳಿದ್ದಲ್ಲದೆ ಆಂಜಿಯೋಗ್ರಾಮ್ ಗೆ ಸಹ ಒಳಗಾಗಿದ್ದರು..
ಇಂದು ನಗರದಲ್ಲಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಕಳೆದ ಒಂದು ದಶಕದಿಂದಲೂ ಅವರಿಗೆ ಥೈರಾಯ್ಡ್, ಅಧಿಕ ರಕ್ತದೊತ್ತಡ ಮತ್ತು ಹೈಪೊಗ್ಲಿಸಿಮಿಯಾ ಸಮಸ್ಯೆಗಳಿದೆ ಎಂದು ಶಿವಕುಮಾರ್ ಅವರ ಆಪ್ತ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


