ರಾಜ್ಯ

ಖಾಸಗಿ ವಲಯಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ನೀತಿ ಹೊರಡಿಸಲು ಸರ್ಕಾರ ಮುಂದು 

ಶುಕ್ರವಾರ ಕನ್ನಡ ನಾಡಿನಾದ್ಯಂತ ರಾಜ್ಯೋತ್ಸವವನ್ನು ಬೆಳಗ್ಗೆಯಿಂದಲೇ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಖಾಸಗಿ ವಲಯಗಳಲ್ಲಿ ಸಿ ಮತ್ತು ಡಿ ಗ್ರೂಪ್ ನೌಕರಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ನೀತಿ ಹೊರಡಿಸಲು ಮುಂದಾಗಿದೆ.

ಖಾಸಗಿ ವಲಯಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ನೀತಿ ಹೊರಡಿಸಲು ಸರ್ಕಾರ ಮುಂದು 
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಶುಕ್ರವಾರ ಕನ್ನಡ ನಾಡಿನಾದ್ಯಂತ ರಾಜ್ಯೋತ್ಸವವನ್ನು ಬೆಳಗ್ಗೆಯಿಂದಲೇ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಖಾಸಗಿ ವಲಯಗಳಲ್ಲಿ ಸಿ ಮತ್ತು ಡಿ ಗ್ರೂಪ್ ನೌಕರಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ನೀತಿ ಹೊರಡಿಸಲು ಮುಂದಾಗಿದೆ.


ಇದರ ಕಾನೂನು ಅಡ್ಡಿಯನ್ನು ಮನಗಂಡಿರುವ ಬಿಜೆಪಿ ಸರ್ಕಾರ ಖಾಸಗಿ ವಲಯಗಳಲ್ಲಿ ಇದನ್ನು ಕಡ್ಡಾಯ ಮಾಡದಿದ್ದರೂ ಕೂಡ ರಾಜ್ಯದ ಜನತೆಗೆ ಆದ್ಯತೆ ನೀಡಬೇಕೆಂದು ಒತ್ತಿ ಹೇಳಿದೆ.


ನಿನ್ನೆ ಸಭೆ ಸೇರಿದ ರಾಜ್ಯ ಸಚಿವ ಸಂಪುಟ ಈ ಸಂಬಂಧ ಕಾನೂನನ್ನು ರಚಿಸಲು ಮುಂದಾಗಿದ್ದು ಖಾಸಗಿ ವಲಯಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ಅದರಲ್ಲಿ ಪ್ರಸ್ತಾಪಿಸಲು ಹೊರಟಿದೆ. ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ಈಗಿರುವ ಕಾನೂನನ್ನು ತಿದ್ದುಪಡಿ ಮಾಡಿ ಖಾಸಗಿ ಕಂಪೆನಿಗಳಲ್ಲಿ ಸಿ ಮತ್ತು ಡಿ ಗ್ರೂಪ್ ನೌಕರಿಯಲ್ಲಿ ಕನ್ನಡಿಗರಿಗೆ ಮಾತ್ರ ನೀಡಬೇಕೆಂದು ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಸರ್ಕಾರ ಕಂಪೆನಿಗಳಿಗೆ ಭೂಮಿ, ನೀರು, ವಿದ್ಯುತ್ ನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿರುವುದರಿಂದ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕೆಂದು ಒತ್ತಾಯಿಸಬಹುದು ಎಂದು ಹೇಳಿದರು.


ಆದರೆ ಈ ನೀತಿ ಜಾರಿಗೆ ಬರುತ್ತದೆಯೇ, ಇಲ್ಲವೇ ಎಂದು ಹಲವರಿಗೆ ಸಂದೇಹವುಂಟಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ, 1983ರಲ್ಲಿಯೇ ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಅದರಲ್ಲಿ ಖಾಸಗಿ ಕಂಪೆನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಒತ್ತಿ ಹೇಳಲಾಗಿದೆ. ಅದಾಗಿ 36 ವರ್ಷಗಳು ಕಳೆದಿವೆ. ಆದರೆ ಯಾವುದೇ ಸರ್ಕಾರ ಅದನ್ನು ಜಾರಿಗೆ ತರುವ ಮನಸ್ಸು ಮಾಡಿಲ್ಲ. ಸರ್ಕಾರಗಳು ಜನರ ಭಾವನೆಗಳ ಜೊತೆ ಆಟವಾಡುತ್ತಿದೆಯಷ್ಟೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.