ಸೂರಾಪುರ ಗ್ರಾಮದಲ್ಲಿ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!
ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಹತ್ತಿದ್ದಾನೆ. ಜಿಲ್ಲೆಯ ಕೊಳ್ಳೇಗಾಲ ಸಮೀಪದ ಸುರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರವಿ ಎಂಬಾತ ಟವರ್ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ್ದಾನೆ.

ಚಾಮರಾಜನಗರ: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿದ್ದಾನೆ. ಜಿಲ್ಲೆಯ ಕೊಳ್ಳೇಗಾಲ ಸಮೀಪದ ಸುರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರವಿ ಎಂಬಾತ ಟವರ್ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ್ದಾನೆ.
ರವಿಯು ಅದೇ ಗ್ರಾಮದ ಟೆಲಿಫೋನ್ ಎಕ್ಸ್ಚೇಂಜ್ನಲ್ಲಿ 17 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ. ಆದರೆ ಶುಕ್ರವಾರ ಆತನನ್ನು ಇದ್ದಕ್ಕಿಂದ್ದಂತೆ ನೌಕರಿಯಿಂದ ತೆಗೆದು ಹಾಕಿದ್ದಾರೆ ಎನ್ನಲಾಗಿದೆ. ಹಾಗೆಯೇ ತನ್ನ ಸಹೋದ್ಯೋಗಿ ಬಸವಣ್ಣ ಎಂಬಾತನಿಗೆ ರವಿಯು 50 ಸಾವಿರ ರೂಪಾಯಿ ಸಾಲ ನೀಡಿದ್ದನಂತೆ. ಆ ವ್ಯಕ್ತಿ ಸಾಲ ಹಿಂದಿರುಗಿಸದೇ ಸತಾಯಿಸಿದ್ದಾನೆ.
ಈ ಎರಡು ಘಟನೆಗಳಿಂದ ಮನನೊಂದು ರವಿ ಟವರ್ ಏರಿದ್ದಾನೆ. ಇನ್ನು ವಿಷಯ ತಿಳಿದ ಕೊಳ್ಳೇಗಾಲ ಸಿಪಿಐ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿ, ಸಾಲ ಹಿಂತಿರುಗಿಸಿಕೊಡುವ ಭರವಸೆ ನೀಡಿದ್ದಾರೆ. ಅಲ್ಲದೆ ಪತ್ನಿಯಿಂದ ಫೋನ್ ಮೂಲಕ ಮಾತನಾಡಿಸಿ ಮನವೊಲಿಸಿದ್ದಾರೆ. ಬಳಿಕ ಇನ್ನು ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಆತನನ್ನು ಕೆಳಗಿಳಿಸಲಾಗಿದೆ.
ವರದಿ: ಗೂಳಿಪುರ ನಂದೀಶ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


