ರಾಜ್ಯ

ಮೈತ್ರಿ ಸರ್ಕಾರ ಪತನ ವಿಚಾರ ಗಂಭೀರತೆ ನಡುವಲ್ಲೇ ಲಂಡನ್'ನತ್ತ ಎಚ್.ಡಿ.ಕುಮಾರಸ್ವಾಮಿ

ರಾಜ್ಯ ರಾಜಕಾರಣದಲ್ಲಿ ಮೈತ್ರಿ ಸರ್ಕಾರದ ಪತನ ವಿಚಾರ ಗಂಭೀರತೆ ಪಡೆಯುತ್ತಿದ್ದು, ಮೈತ್ರಿ ಸರ್ಕಾರ ಪತನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೇ ಕಾರಣರನ್ನಾಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಂತ್ರರೂಪಿಸುತ್ತಿರುವ...

ಮೈತ್ರಿ ಸರ್ಕಾರ ಪತನ ವಿಚಾರ ಗಂಭೀರತೆ ನಡುವಲ್ಲೇ ಲಂಡನ್'ನತ್ತ ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ
Published On :

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮೈತ್ರಿ ಸರ್ಕಾರದ ಪತನ ವಿಚಾರ ಗಂಭೀರತೆ ಪಡೆಯುತ್ತಿದ್ದು, ಮೈತ್ರಿ ಸರ್ಕಾರ ಪತನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೇ ಕಾರಣರನ್ನಾಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಂತ್ರರೂಪಿಸುತ್ತಿರುವ ಸಂದರ್ಭದಲ್ಲಿಯೇ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ.

ಸಿದ್ದರಾಮಯ್ಯ ಅವರನ್ನು ಖೆಡ್ಡಾಕ್ಕೆ ಕೆಡವಲು ಯಡಿಯೂರಪ್ಪ ಜೊತೆ ಕುಮಾರಸ್ವಾಮಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಮುನ್ನಲೆಗೆ ಬರುತ್ತಿದ್ದು, ಇಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ವಿದೇಶಕ್ಕೆ ಹಾರಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಪುತ್ರ ನಿಖಿಲ್ ಸಿನಿಮಾ ವಿಚಾರವಾಗಿ ನಾಲ್ಕು ದಿನಗಳ ಕಾಲ ಪತ್ನಿ ಅನಿತಾ ಜೊತೆಯಾಗಿ ಲಂಡನ್ ಗೆ ತೆರಳಿದ್ದು, ನ‌.8 ರಂದು ಅವರು ಬೆಂಗಳೂರಿಗೆ ವಾಪಸಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.