ಚಿಕ್ಕಮಗಳೂರು: ವಿದೇಶದಲ್ಲಿ ಉದ್ಯೋಗದ ಕನಸು ಕಂಡಿದ್ದ ಯುವತಿ ರಸ್ತೆ ಗುಂಡಿಗೆ ಬಲಿ!
ವಿದೇಶದಲ್ಲಿ ಉದ್ಯೋಗಮಾಡಬೇಕೆಂದುಕೊಂಡಿದ್ದ ಯುವತಿಯೊಬ್ಬಳು ರಸ್ತೆಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ವಿದೇಶದಲ್ಲಿ ಉದ್ಯೋಗ ಮಾಡಬೇಕೆಂದುಕೊಂಡಿದ್ದ ಯುವತಿಯೊಬ್ಬಳು ರಸ್ತೆಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದ ಘಟನೆಯಲ್ಲಿ ಸಿಂದೂಜಾ (23) ಎಂಬ ಯುವತಿ ರಸ್ತೆ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ.
ಸಿಂಧೂಜಾ ವಿದೇಶದಲ್ಲಿ ಉದ್ಯೋಗ ಪಡೆಯುವ ಉದ್ದೇಶದೊಡನೆ ಪಾಸ್ಪೋರ್ಟ್ ಗೆ ಅಪ್ಲೇ ಮಾಡಿದ್ದಳು. ಅದರ ವೆರಿಫಿಕೇಷನ್ ಗಾಗಿ ತನ್ನ ತಂದೆಯ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ದಂಡರಮಕ್ಕಿ ಸಮೀಪದಲ್ಲಿನ ರಸ್ತೆಯಲ್ಲಿದ್ದ ದೊಡ್ಡ ಗಾತ್ರದ ಗುಂಡಿಯನ್ನು ಗಮನಿಸದೆ ಹೋಗಿದ್ದು ಬೈಕ್ ಗುಂಡಿಗೆ ಇಳಿದಿದಿದೆ. ಇದರಿಂದಾಗಿ ಸಿಂಧೂಜಾ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಲೆಗೆ ಗಂಭೀರ ಗಾಯವಾಗಿದ್ದ ಕಾರಣ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇಂಜಿನಿಯರಿಂಗ್ ಪದವಿ ಪಡೆದಿದ್ದ ಸಿಂಧೂಜಾಗೆ ವಿದೇಶದಲ್ಲಿ ಉದ್ಯೋಗ ಅವಕಾಶ ಸಿಕ್ಕಿತ್ತು. ಅದಕ್ಕಾಗಿ ಆಕೆ ತಂದೆಯ ಬೈಕ್ ನಲ್ಲಿ ತೆರಳಿದ್ದರು. ಘಟನೆ ವೇಳೆ ತಂದೆ ಹೆಲ್ಮೆಟ್ ಹಾಕಿದ್ದ ಹಿನ್ನೆಲೆ ಹೆಚ್ಚಿನ ಅಪಾಯವಿಲ್ಲದೆ ಪಾರಾಗಿದ್ದಾರೆ.
ರಸ್ತೆ ಸರಿಯಿಲ್ಲದ ಕಾರಣ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಸಿಂಧೂಜಾ ತಂದೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರಿತ್ತಿದ್ದಾರೆ. ಇನ್ನು ಯುವತಿಯ ಸಾವಿನ ಬಳಿಕ ಹಲವು ಸಂಘಟನೆಗಳು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದೆ.ಇತ್ತ ಸಾಮಾಜಿಕ ತಾಣಗಳಲ್ಲಿ ಸಹ ರಸ್ತೆ ಗುಂಡಿ ಮುಚ್ಚದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


