ಚಿಕ್ಕಮಗಳೂರು: ಕರಡಿಗವಿ ಮಠದ ಶಂಕರಾನಂದ ಸ್ವಾಮಿಜಿ ಲಿಂಗೈಕ್ಯ
ಚಿಕ್ಕಮಗಳೂರು ಜಿಲ್ಲೆಯ ಶ್ರೀ ಕರಡಿಗವಿ ಮಠದ ಶಂಕರಾನಂದ ಸ್ವಾಮಿಜಿ (60) ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಗೆ ಆರೋಗ್ಯ ಹದಗೆಟ್ಟಿತ್ತು.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶ್ರೀ ಕರಡಿಗವಿ ಮಠದ ಶಂಕರಾನಂದ ಸ್ವಾಮಿಜಿ (60) ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಗೆ ಆರೋಗ್ಯ ಹದಗೆಟ್ಟಿತ್ತು.
ಶ್ರೀ ಕರಡಿಗವಿ ಮಠ ಶಂಕರಾನಂದ ಸ್ವಾಮಿಜಿ ಅವರು ಲಿಂಗೈಕ್ಯರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಿಂದ ಮಠಕ್ಕೆ ತಂದ ಒಂದೇ ಗಂಟೆಯಲ್ಲಿ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಕರಡಿಗವಿ ಮಠದ ಸ್ವಾಮೀಜಿಯಾಗಿದ್ದ ಶಂಕರಾನಂದ ಸ್ವಾಮೀಜಿ ಕಳೆದ ಕೆಲ ಸಮಯದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇತ್ತೀಚೆಗೆ ಆರೊಗ್ಯ ಮತ್ತಷ್ಟು ಹದಗೆಟ್ಟಿದ್ದು, ಎರಡು ತಿಂಗಳಿಂದ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸ್ವಾಮೀಜಿಯವರನ್ನು ಮಠಕ್ಕೆ ಕರೆತರಲಾಗಿತ್ತು. ಆದರೆ ಮಠಕ್ಕೆ ಕರೆತಂದ ಒಂದೇ ಗಂಟೆಯಲ್ಲಿ ಸ್ವಾಮೀಜಿ ವಿಧಿವಶರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


