ಟಿಪ್ಪು ಜಯಂತಿ ರದ್ದು ಆದೇಶ ಮರು ಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಟಿಪ್ಪು ಜಯಂತಿ ರದ್ದುಗೊಳಿಸಿದ ಆದೇಶವನ್ನು ಮರು ಪರಿಶೀಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ.

ಬೆಂಗಳೂರು: ಟಿಪ್ಪು ಜಯಂತಿ ರದ್ದುಗೊಳಿಸಿದ ಆದೇಶವನ್ನು ಮರು ಪರಿಶೀಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ.
ಟಿಪ್ಪು ಜಯಂತಿ ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಮುಂದಿನ ಎರಡು ತಿಂಗಳ ಒಳಗಾಗಿ ಈ ಕುರಿತು ಕೂಲಂಕುಷ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಿ. ಖಾಸಗಿಯಾಗಿ ಯಾರಾದರೂ ಆಚರಣೆ ಮಾಡಬಯಸಿದರೆ ಅವರಿಗೆ ಸೂಕ್ತ ರಕ್ಷಣೆ ಕೊಡಿ ಎಂದು ಸೂಚಿಸಿದೆ.
2020ರ ಜನವರಿ 3ರಂದು ನಡೆಯುವ ಮುಂದಿನ ವಿಚಾರಣೆ ವೇಳೆ ಸರ್ಕಾರ ತನ್ನ ನಿರ್ಧಾರ ತಿಳಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.
ರಾಜ್ಯಾದ್ಯಂತ 28 ಜಯಂತಿಗಳನ್ನು ಸರ್ಕಾರವೇ ಆಚರಿಸುತ್ತಿದೆ. ಟಿಪ್ಪು ಜಯಂತಿಯನ್ನು ಮಾತ್ರ ರದ್ದುಪಡಿಸಿರುವುದು ದುರಂತ. ಸರ್ಕಾರದ ಈ ನಡೆಯಿಂದ ಜಾತಿ ತಾರತಮ್ಯವಾದಂತಿದೆ. ಸರ್ಕಾರ ಯಾವಾಗ ಬೇಕಾದರೂ ತನ್ನ ನೀತಿಗಳನ್ನ ಬದಲಿಸಿಕೊಳ್ಳಲಿ. ಆದರೆ, ಅದಕ್ಕೂ ಒಂದು ರೀತಿ, ನಿಯಮಗಳಿವೆ. ಈ ರೀತಿ ಏಕಾಏಕಿ ಜಯಂತಿ ರದ್ದು ಮಾಡಿರುವುದು ಸರಿಯಲ್ಲ ಎಂದು ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಬೇರೆ ಪ್ರಮುಖರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವ ಬಗ್ಗೆ ಹಾಗೂ ಆ ಕುರಿತು ಕೈಗೊಳ್ಳಲಾಗಿರುವ ಆದೇಶಗಳ ಬಗ್ಗೆ ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಿ ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


