ಚಿಕ್ಕೋಡಿ:ಶಾಲಾ ವಾಹನ ಹರಿದು ವಿದ್ಯಾರ್ಥಿನಿ ಸಾವು
ಪಟ್ಟಣದ ಮೆಹಬೂಬ ನಗರದ ಬಳಿ ಶಾಲಾ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೆ ಸಾವಿಗೀಡಾದ ಘಟನೆ ನಡೆದಿದೆ.

ಚಿಕ್ಕೋಡಿ: ಪಟ್ಟಣದ ಮೆಹಬೂಬ ನಗರದ ಬಳಿ ಶಾಲಾ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೆ ಸಾವಿಗೀಡಾದ ಘಟನೆ ನಡೆದಿದೆ.
ಶಾಲಾ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಸೇಂಟ್ ಫ್ರಾನ್ಸಿಸ್ ಶಾಲೆಗೆ ಸೇರಿದ ಬಸ್ ಢಿಕ್ಕಿ ಹೊಡೆದು, 5 ವರ್ಷದ ಬಾಲಕಿ ಸ್ಥಳದಲ್ಲಿಯೇ ಮೃಪಪಟ್ಟಿದ್ದಾಳೆ.
ತಾಯಿ ಹಾಗೂ ಸಹೋದರ ಮಾವನೊಂದಿಗೆ ಬೈಕ್ ಮೇಲೆ ಹೊರಟಿದ್ದಳು. ರಾಜನಂದಿನಿ ತಾಯಿ ಹಾಗೂ ಮಾವನಿಗೂ ಸಹ ಸಣ್ಣ ಪುಟ್ಟ ಗಾಯಗಳಾಗಿವೆ. ತಿರುವಿನಲ್ಲಿ ಅತಿ ವೇಗದ ಬಸ್ ಚಲಾವಣೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


