ರಾಜ್ಯ

ಉಗ್ರರೊಂದಿಗಿನ ಕಾದಾಟದಲ್ಲಿ ವೀರ ಮರಣವನ್ನಪ್ಪಿದ ಬೆಳಗಾವಿ ಯೋಧ 

ನಾಲ್ಕು ವರ್ಷಗಳ ಹಿಂದೆ ಭಾರತೀಯ ಸೈನ್ಯ ಸೇರಿದ್ದ ಬೆಳಗಾವಿಯ ಯೋಧ ರಾಹುಲ್ ಸುಳಗೇಕರ (22) ಹುತಾತ್ಮನಾಗಿದ್ದಾರೆ.

ಉಗ್ರರೊಂದಿಗಿನ ಕಾದಾಟದಲ್ಲಿ ವೀರ ಮರಣವನ್ನಪ್ಪಿದ ಬೆಳಗಾವಿ ಯೋಧ 
ಸಂಗ್ರಹ ಚಿತ್ರ
Published On :

ಬೆಳಗಾವಿ: ನಾಲ್ಕು ವರ್ಷಗಳ ಹಿಂದೆ ಭಾರತೀಯ ಸೈನ್ಯ ಸೇರಿದ್ದ ಬೆಳಗಾವಿಯ ಯೋಧ ರಾಹುಲ್ ಸುಳಗೇಕರ (22) ಹುತಾತ್ಮನಾಗಿದ್ದಾರೆ.

ಬೆಳಗಾವಿ ತಾಲೂಕಿನ ಉಚಗಾವ ಗ್ರಾಮದ ಈ ವೀರ ಯೋಧ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹೋರಾಡಿ ವೀರಮರಣವನ್ನಪ್ಪಿದ್ದಾರೆ. ರಾಹುಲ್ ರಜೆಯ ಮೇಲೆ ಗಣೇಶ ಉತ್ಸವ ವೇಳೆ ತವರಿಗೆ ಬಂದು ಕರ್ತವ್ಯಕ್ಕೆ ಹಿಂದಿರುಗಿದ್ದರು.

ಜಮ್ಮುವಿನ ಪುಂಚ್ ಬಳಿ ಭಯೋತ್ಪಾದಕರೊಂದಿಗೆ ಸೆಣಸಾಡುವಾಗ ಗುಂಡು ತಗುಲಿ ಹುತಾತ್ಮನಾಗಿದ್ದಾರೆ. ರಾಹುಲ್ ಅಣ್ಣ ಮಯೂರ ಕೂಡ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಹುಲ್‌ ಅವರ ತಂದೆ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತನ್ನ ಇಬ್ಬರೂ ಮಕ್ಕಳನ್ನೂ ಸೇನೆಗೆ ಸೇರಿಸಿ ತಂದೆ ಭೈರು ಸುಳಗೇಕರ‌ ದೇಶಾಭಿಮಾನ ಮೆರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.