ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ, ಹಿಂಬದಿ ಸವಾರ ದುರ್ಮರಣ
ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟರೆ, ಸವಾರ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಬೆಂಗಳೂರು: ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟರೆ, ಸವಾರ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ.
ಕೆಂಗೇರಿಯ ಬೀಡಿ ಕಾಲೋನಿಯ ಮುಹಮ್ಮದ್ ಸನಾಉಲ್ಲಾ (18) ಮೃತಪಟ್ಟವರು. ಘಟನೆಯಲ್ಲಿ ಸಾಧಿಕ್ ಪಾಷ (26) ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಸಾದಿಕ್ ಪಾಷ ಅವರು ಸ್ನೇಹಿತನಾಗಿದ್ದ ಗುಜರಿ ವ್ಯಾಪಾರಿ ಮಹ್ಮದ್ ಸನಾಉಲ್ಲಾ ಅವರನ್ನು ಹೊಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಕೂರಿಸಿಕೊಂಡು ರಾತ್ರಿ 10 ಗಂಟೆ ಸುಮಾರಿಗೆ ಕೆಂಗೇರಿ ಕಡೆಯಿಂದ ಆರ್.ವಿ. ಕಾಲೇಜಿನ ಕಡೆಗಿನ ರಸ್ತೆಯಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆ ಸಂಬಂಧ ಕೆಂಗೇರಿ ಸಂಚಾರಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


