ಸುಧಾಕರ್ ಕೈ ಕಡಿಯುವೆ ಎಂದಿದ್ದ ಶಾಸಕ ಶಿವಶಂಕರ ರೆಡ್ಡಿ ವಿರುದ್ಧ ಎಫ್‍ಐಆರ್
ಅನರ್ಹ ಶಾಸಕರ ವಿಚಾರದಲ್ಲಿ ರಾಜಕೀಯವಾಗಿ ಕೆಸರೆರಚಾಟ ಮುಂದುವರೆದಿರುವ ಬೆನ್ನಲ್ಲೇ ಮಾಜಿ ಸಚಿವ, ಶಾಸಕ ಎಚ್.ಎನ್.ಶಿವಶಂಕರ್ ರೆಡ್ಡಿ ವಿರುದ್ಧ ಗೌರಿ ಬಿದನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೌರಿಬಿದನೂರು: ಅನರ್ಹ ಶಾಸಕರ ವಿಚಾರದಲ್ಲಿ ರಾಜಕೀಯವಾಗಿ ಕೆಸರೆರಚಾಟ ಮುಂದುವರೆದಿರುವ ಬೆನ್ನಲ್ಲೇ ಮಾಜಿ ಸಚಿವ, ಶಾಸಕ ಎಚ್.ಎನ್.ಶಿವಶಂಕರ್ ರೆಡ್ಡಿ ವಿರುದ್ಧ ಗೌರಿ ಬಿದನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನರ್ಹಗೊಂಡ ಶಾಸಕ ಡಾ.ಕೆ.ಸುಧಾಕರ್ ಅವರ ಕೈ ಕಡಿಯುವುದಾಗ ಹೇಳಿಕೆ ನೀಡಿದ ಆರೋಪದಡಿ ಬೆಂಗಳೂರಿನ ೮೧ನೇ ಅಡಿಷನಲ್ ಸಿಟಿ ಸಿವಿಲ್ ಸೆಷನ್ಸ್ ನ್ಯಾಯಾಲಯ ಶಿವಶಂಕರ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶಿಸಿತ್ತು.
ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಹೊಸ ತಾಲೂಕಾಗಿ ಘೋಷಣೆ ಮಾಡಿ, ಹಲವು ಗ್ರಾಮ ಪಂಚಾಯತ್‌ಗಳನ್ನು ಇದರಲ್ಲಿ ಸೇರ್ಪಡೆಗೊಳಿಸಿತ್ತು. ಈ ವೇಳೆ ತೊಂಡೇಬಾವಿಯನ್ನು ಮಂಚೇನಹಳ್ಳಿ ತಾಲೂಕಿಗೆ ಸೇರ್ಪಡೆ ಮಾಡುವುದಕ್ಕೆ ವಿರೋಧಿಸಿದ್ದ ಶಾಸಕ ಶಿವಶಂಕರ ರೆಡ್ಡಿ ತನ್ನ ಕ್ಷೇತ್ರದ ತಂಟೆಗೆ ಬಂದರೆ ಕೈ ಕತ್ತರಿಸುತ್ತೇನೆ ಎಂದು ಅನರ್ಹ ಶಾಸಕ ಡಾ.ಕೆ. ಸುಧಾರ್ ಅವರಿಗೆ ಧಮಕಿ ಹಾಕಿದ್ದರು.
ಶಿವಶಂಕರ ರೆಡ್ಡಿ ವಿರುದ್ಧ ಐಪಿಸಿ ಸೆಕ್ಷನ್ 120b, 124, 121, 141, 506, 506b, 159 ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


