ರಾಜ್ಯ

ಐಎಂಎ ಪ್ರಕರಣ: ಜಿಲ್ಲಾಧಿಕಾರಿ ವಿಜಯ ಶಂಕರ್ ಸೇರಿ ಮೂವರ ವಿರುದ್ಧ ಸಿಬಿಐ ನಿಂದ ಎಫ್.ಐ.ಆರ್

ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿರುವ ಆರೋಪ ಹೊತ್ತಿರುವ ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.

ಐಎಂಎ ಪ್ರಕರಣ: ಜಿಲ್ಲಾಧಿಕಾರಿ ವಿಜಯ ಶಂಕರ್ ಸೇರಿ ಮೂವರ ವಿರುದ್ಧ ಸಿಬಿಐ ನಿಂದ ಎಫ್.ಐ.ಆರ್
ಸಂಗ್ರಹ ಚಿತ್ರ
Published On :

ಬೆಂಗಳೂರು: ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿರುವ ಆರೋಪ ಹೊತ್ತಿರುವ ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.

ಐಎಂಎ ಸಂಸ್ಥೆಯಿಂದ ಲಂಚ ಪಡೆದು ಸಂಸ್ಥೆಗೆ ನೆರವಾಗಿರುವ ಆರೋಪದಲ್ಲಿ ಮಾನತುಗೊಂಡಿರುವ ಜಿಲ್ಲಾಧಿಕಾರಿ ಬಿ.ಎಂ. ವಿಜಯ ಶಂಕರ್ , ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ. ನಾಗರಾಜ್, ಗ್ರಾಮಲೆಕ್ಕಿಗ ಮಂಜುನಾಥ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಐಎಂಎ ಸಂಸ್ಥೆ ಪರ ವರದಿ ನೀಡಲು ಐಎಂಎ ನಿರ್ದೇಶಕರಿಂದ ಗ್ರಾಮ ಲೆಕ್ಕಿಗ ಮಂಜುನಾಥ್ ಮೂಲಕ ವಿಜಯಶಂಕರ್ ಮತ್ತು ನಾಗರಾಜ್ ಜ ಲಂಚ ಪಡೆದಿದ್ದರು. ಐಎಂಎ ಹಾಗೂ ಅಧಿಕಾರಿಗಳ ನಡುವೆ ಮಂಜುನಾಥ್ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ. ಐಎಂಎ ಪರ ವರದಿ ನೀಡಿದ ಬಳಿಕ ಹಣ ಪಡೆದಿರುವುದಾಗಿ ಆರೋಪಿಗಳು ಸಿಬಿಐ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. 

ರಾಜ್ಯ ಸರ್ಕಾರಈ ಮೂವರುಅ ಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಕ್ರಮ ತೆಗೆದುಕೊಳ್ಲಲು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅನುಮತಿ ನೀಡಿದ ಬಳಿಕ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಐಎಂಎ ಪ್ರಕರಣದಲ್ಲಿ ಸಿಬಿಐ ದಾಖಲಿಸುತ್ತಿರುವ ಮೂರಬೇ ಎಫ್‌ಐಆರ್ ಇದಾಗಿದ್ದು ಇದಕ್ಕೆ ಹಿಂದೆ ಎರಡು ದೋಷಾರೋಪ ಪಟ್ಟಿ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.