ನದಿಗೆ ಹಾರಿ ದಂಪತಿ ಆತ್ಮಹತ್ಯೆ
ಘಟಪ್ರಭ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಧೋಳ ತಾಲೂಕು ಚಿಂಚಖಂಡಿ ಬಳಿ ಭಾನುವಾರ ಸಂಜೆ ನಡೆದಿದೆ.

ಬಾಗಲಕೋಟೆ: ಘಟಪ್ರಭ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಧೋಳ ತಾಲೂಕು ಚಿಂಚಖಂಡಿ ಬಳಿ ಭಾನುವಾರ ಸಂಜೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಮಕೇರಿ ಗ್ರಾಮದ ಮೌನೇಶ ಪುಂಡಲಿಕ ಕುಂಬಾರ(28), ಅಕ್ಷತಾ ಮೌನೇಶ ಕುಂಬಾರ(25) ಎಂದು ಗುರುತಿಸಲಾಗಿದೆ. ಮೌನೇಶ ಜಿಕೆ. ಸಿಮೆಂಟ್ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದು, ಪತ್ನಿಯೊಂದಿಗೆ ಬೈಕ್ ಮೇಲೆ ಚಿಚಖಂಡಿ ಸೇತುವೆ ಬಳಿ ಬಂದು ಸೇತುವೆ ಮೇಲೆ ಬೈಕ್ ನಿಲ್ಲಿಸಿ ನಮ್ಮ ಸಾವಿಗೆ ನಾವೇ ಕಾರಣರು ಎಂದು ಡೆತ್ ನೋಟ ಬರೆದು ನದಿಗೆ ಹಾರಿದ್ದಾರೆ.
ದಂಪತಿಗಳ ಶವ ಹುಡುಕುವ ಕಾರ್ಯಾಚರಣೆ ನಡೆದಿದ್ದು, ಸಂಜವರೆಗೂ ಶವ ಪತ್ತೆ ಆಗಿರಲಿಲ್ಲ. ಮುಧೋಳ ಲೋಕಾಪುರ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದಂಪತಿ ಶವ ಪತ್ತೆ ಕಾರ್ಯ ನಡೆಸಿದ್ದಾರೆ.
ವರದಿ: ವಿಠ್ಠಲ ಬಲಕುಂದಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


