ಬೆಂಗಳೂರು: ಕೋಟಕ್ ಮಹೀಂದ್ರ ಬ್ಯಾಂಕ್ ಡೆಪ್ಯುಟಿ ಮ್ಯಾನೇಜರ್ ಆತ್ಮಹತ್ಯೆ
ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರ ಮಾಜಿ ಸಲಹೆಗಾರನ ಪುತ್ರ ಕೋಟಕ್ ಮಹೀಂದ್ರ ಬ್ಯಾಂಕ್‌ನ ಉಪ ಪ್ರಬಂಧಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು: ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರ ಮಾಜಿ ಸಲಹೆಗಾರನ ಪುತ್ರ ಕೋಟಕ್ ಮಹೀಂದ್ರ ಬ್ಯಾಂಕ್‌ನ ಉಪ ಪ್ರಬಂಧಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕೋಟಕ್ ಮಹೀಂದ್ರ ಬ್ಯಾಂಕ್‌ನ ಡೆಪ್ಯುಟಿ ಮ್ಯಾನೇಜರ್ ಆಗಿದ್ದ 27 ವರ್ಷದ ರೋಹಿತ್, ನಗರದ ದೊಮ್ಮಲೂರು ಬಳಿಯ ಸಾಯಿಕೃಷ್ಣ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಪಾರ್ಟ್ಮೆಂಟ್ನ ಫ್ಯ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ರವಾನಿಸಿದರು.ಮೃತನ ಸಾವಿಗೆ ಕಾರಣವಿನ್ನೂ ತಿಳಿದುಬಂದಿಲ್ಲ.
ಮೃತಪಟ್ಟ ಎರಡು ದಿನಗಳ ನಂತರ ಶವ ಪತ್ತೆಯಾಗಿದೆ ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ. ರೋಹಿತ್ ಸ್ನಾತಕೋತ್ತರ ಪದವಿಧರರಾಗಿದ್ದು ಕಳೆದ ಒಂದೆರಡು ವರ್ಷಗಳಿಂದ ದೊಮ್ಮಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ತಂಗಿದ್ದರು ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


