ಮಂಡ್ಯ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಸಾಲದ ಬಾದೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಸಾಲದ ಬಾದೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ದೊಡ್ಡಸೋಮನಹಳ್ಳಿ ಗ್ರಾಮದ ಭದ್ರೇಗೌಡ(48) ಎಂದು ಗುರುತಿಸಲಾಗಿದೆ.
ಘಟನೆ ವಿವರ;
ರೈತ ಭದ್ರೇಗೌಡ ಕೃಷಿ ಗಾಗಿ, ಕೆ.ಆರ್.ಪೇಟೆ ತಾಲ್ಲೂಕಿನಅಘಲಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಒಂದೂವರೆ ಲಕ್ಷ ಬೆಳೆ ಸಾಲ ಹಾಗೂ ಅಘಲಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 80ಸಾವಿರ ಸಾಲ ಜೊತೆಗೆ ಹಾಗೂ 4ಲಕ್ಷ ಕೈ ಸಾಲ ಮಾಡಿದ್ದರು,
ಎರಡೂವರೆ ಎಕರೆ ಜಮೀನಿನಲ್ಲಿ ಬೆಳೆಗಾಗಿ ಸುಮಾರು 3ಕೊಳವೆ ಬಾವಿ ಕೊರೆಸಿದ್ದರು. ನೀರು ಸರಿಯಾಗಿ ಬಾರದೆ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಬೆಳೆದಿದ್ದ ರಾಗಿ ಒಣಗಿತ್ತು.ಇದರ ನಡುವೆ ಖಾಸಗಿ ಸಾಲಗಾರರ ಕಿರುಕುಳವೂ ಜಾಸ್ತಿಯಾಗಿತ್ತು, ಇದರಿಂದ ಮನನೊಂದ ತಮ್ಮ ಜಮೀನಿನಲ್ಲಿ ಇರುವ ಕೃಷಿ ಪಂಪ್ ಸೆಟ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಮೃತ ರೈತನಿಗೆ ವೃದ್ದ ತಾಯಿ ಪತ್ನಿ ಇಬ್ಬರು ಮಕ್ಕಳಿದ್ದಾರೆ.
ಘಟನೆ ಕುರಿತು ಪತ್ನಿ ಮಮತಾ ಕೆ.ಆರ್.ಪೇಟೆ ಪಟ್ಟಣ ಪೋಲೀಸರಿಗೆ ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಅಘಲಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಂಜಯ, ಅಘಲಯ ಸೊಸೈಟಿ ಅಧ್ಯಕ್ಷ ಹೋಬಳಿ ಕುಮಾರ್, ಡಿ.ಎಸ್.ನಾಗೇಂದ್ರ ಮತ್ತಿತರರು ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮೃತ ರೈತನ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ವರದಿ-ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


