ರಾಜ್ಯ

ಫೆ.5, 6, 7ರಂದು ಕಲಬುರಗಿ ವಿವಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 5 ರಿಂದ 7ರ ವರೆಗೆ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.

ಫೆ.5, 6, 7ರಂದು ಕಲಬುರಗಿ ವಿವಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಮನು ಬಳಿಗಾರ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 5 ರಿಂದ 7ರ ವರೆಗೆ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.

ಇಂದು ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ್ ಹಾಗೂ ಜಿಲ್ಲಾಧಿಕಾರಿ ಬಿ. ಶರತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ.

ಉತ್ತರ ಕರ್ನಾಟಕದಲ್ಲಿ ನೆರೆ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆಬ್ರವರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂಜು ಮನು ಬಳಿಗಾರ್ ಅವರು ತಿಳಿಸಿದ್ದಾರೆ.

1987ರ ನಂತರ ಕಲಬುರಗಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸುವ ಅವಕಾಶ ದೊರೆತಿದ್ದು, 31 ವರ್ಷಗಳ ನಂತರ ಅಕ್ಷರ ಜಾತ್ರೆಗೆ ಕಲ್ಯಾಣ ಕರ್ನಾಟಕ ಸಜ್ಜಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.