ಅನಂತ ಕುಮಾರ್ ಪುಣ್ಯ ತಿಥಿ: ಸಿಎಂ ಯಡಿಯೂರಪ್ಪ ಗೌರವ ನಮನ
ಬಿಜೆಪಿಯ ಹಿರಿಯ ಮುಖಂಡ, ದಿ. ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುಣ್ಯ ತಿಥಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರು: ಬಿಜೆಪಿಯ ಹಿರಿಯ ಮುಖಂಡ, ದಿ. ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುಣ್ಯ ತಿಥಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗೌರವ ನಮನ ಸಲ್ಲಿಸಿದ್ದಾರೆ.
ಸರಳ ಸಜ್ಜನಿಕೆಯ ವ್ಯಕ್ತಿ, ಸಂಘಟನಾ ಚತುರ, ರಾಜ್ಯ ಮತ್ತು ಕೇಂದ್ರದ ನಡುವೆ ಕೊಂಡಿಯಂತಿದ್ದ, ಅದ್ವಿತೀಯ ನಾಯಕ, ನನ್ನ ಪರಮಾಪ್ತ ಅನಂತ್ ಕುಮಾರ್ ಅವರು, ನಮ್ಮನ್ನಗಲಿದ ದಿನ ನೆನೆದರೆ ಮನಸ್ಸು ಭಾರವಾಗುವುದು. ದೇಶಕ್ಕಾಗಿ ನೀಡಿದ ಸೇವೆಯಿಂದ ಅವರು ಸದಾ ಜೀವಂತ. ಅದಮ್ಯ ಚೇತನ ಅನಂತ್ ಕುಮಾರ್ ಅವರ ಪುಣ್ಯತಿಥಿಯಂದು ನನ್ನ ಭಾವಪೂರ್ಣ ಶ್ರದ್ಧಾಂಜಲಿ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಅನಂತ್‌ಕುಮಾರ್ ಪುಣ್ಯಸ್ಮರಣೆ ಅಂಗವಾಗಿ ಹುಬ್ಬಳ್ಳಿಯಲ್ಲಿ ಇಂದು ಹಲವು ಆರೋಗ್ಯ ತಪಾಸಣೆ, ರಕ್ತ ಪರೀಕ್ಷೆ, ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್‌ಗಳ ನೋಂದಣಿ ಹಾಗೂ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭ ಸ್ವಯಂ ಸೇವಕರು ಮತ್ತು ಅಭಿಮಾನಿಗಳು ರಕ್ತದಾನ ಮಾಡಲಿದ್ದಾರೆ ಎಂದು ದಿವಂಗತ ಅನಂತ್‌ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್‌ಕುಮಾರ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


