14 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಪ್ರಾರಂಭ, ಮಂಗಳೂರಿನಲ್ಲಿ ನಳಿನ್ ಕಟೀಲ್ ಹಕ್ಕು ಚಲಾವಣೆ
ರಾಜ್ಯದ ವಿವಿಧ ಜಿಲ್ಲೆಗಳ ಕೆಲವೆಡೆ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭಗೊಂಡಿದ್ದು, ಸಂಜೆ 6 ಗಂಟೆವರೆಗೆ ನಡೆಯಲಿದೆ.

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಕೆಲವೆಡೆ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭಗೊಂಡಿದ್ದು, ಸಂಜೆ 6 ಗಂಟೆವರೆಗೆ ನಡೆಯಲಿದೆ.
2 ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ, 3 ಪಟ್ಟಣ ಪಂಚಾಯಿತಿಗಳಿಗೆ ಇಂದು ಮತದಾನ ಪ್ರಗತಿಯಲ್ಲಿದೆ. ದಾವಣಗೆರೆ ಮಹಾನಗರ ಪಾಲಿಕೆ, ಮಂಗಳೂರು ಮಹಾನಗರ ಪಾಲಿಕೆ, ಚಿಕ್ಕಬಳ್ಳಾಪುರ, ಕನಕಪುರ, ಕೋಲಾರದ 3 ನಗರಸಭೆಗಳಿಗೆ ಮತದಾನ ನಡೆಯುತ್ತಿದೆ. ಮಾಗಡಿ ಪುರಸಭೆ, 3 ಪಟ್ಟಣ ಪಂಚಾಯಿತಿಗಳಿಗೂ ಮತದಾನ ನಡೆಯುತ್ತಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಇಂದು ಬೆಳಗ್ಗೆ 7ಗಂಟೆಯಿಂದ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ಬೆಳಗಿನಿಂದಲೇ ಮತದಾನ ಚುರುಕಾಗಿದ್ದು ನಗರದ ಲೇಡಿಹಿಲ್ ಸಮೀಪದ ಸೆಂಟ್ ಅಲೋಷಿಯಸ್ ಶಾಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನೊಂದೆಡೆ ಉರ್ವ ಮಾರಿಗುಡಿ ಸಮೀಪದ ಸರ್ಕಾರಿ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಮತದಾನ ಮಾಡಿದ್ದಾರೆ.
ಒಟ್ಟಾರೆ 418 ವಾರ್ಡ್ ಗಳಿಗೆ ಮತದಾನ ನಡೆಯುತ್ತಿದ್ದು ಮತದಾನದ ಸ್ಥಳಗಳಲ್ಲಿ ರಜೆ ಘೊಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


