ರಾಜ್ಯ

ಕಲಬುರಗಿ: ಸಿನಿಮೀಯ ಶೈಲಿಯಲ್ಲಿ ವ್ಯಕ್ತಿ ಕೊಲೆ, ಐವರ ಬಂಧನ

ಇತ್ತೀಚೆಗಷ್ಟೇ ನಗರದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಫರಹತ್ತಬಾದ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ: ಸಿನಿಮೀಯ ಶೈಲಿಯಲ್ಲಿ ವ್ಯಕ್ತಿ ಕೊಲೆ, ಐವರ ಬಂಧನ
ಕಲಬುರಗಿ: ಸಿನಿಮೀಯ ಶೈಲಿಯಲ್ಲಿ ವ್ಯಕ್ತಿ ಕೊಲೆ, ಐವರ ಬಂಧನ
Published On :

ಕಲಬುರಗಿ: ಇತ್ತೀಚೆಗಷ್ಟೇ ನಗರದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಫರಹತ್ತಬಾದ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ರವಿ ಹೊಸಮನಿ (24), ರಾಜು ಮಯೂರ್ (27), ರೋಹಿತ್ ಹೊಸಮನಿ (20), ಲೋಹಿತ್ ಹೊಸಮನಿ (22), ಗೋವಿಂದ ಕಾಂಬಳೆ (19) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ವಾಹನ, ಮಾರಕಾಸ್ತ್ರಗಳು ಮತ್ತಿತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ನ. 4ರಂದು ಚಲಿಸುತ್ತಿದ್ದ ಕಾರಿಗೆ ಕಾರಿನಿಂದ ಡಿಕ್ಕಿ ಹೊಡೆದು ಮಾರಕಾಸ್ತ್ರಗಳಿಂದ ಶಿವಲಿಂಗ ಎಂಬುವವರನ್ನು ಕಲಬುರಗಿ ನಗರದ ಹೊರವಲಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು.

ಪ್ರಕರಣದಲ್ಲಿ ಭಾಗಿಯಾಗಿ ತಕೆಮರೆಸಿಕೊಂಡಿರುವ ಇನ್ನಷ್ಟು ಆರೋಪಿಗಳ ಪತ್ತೆಗೆ ಬಲೆ ಬೀಸಲಗಿದೆ ಎಂದು ಪೋಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.