ಮಕ್ಕಳ ದಿನದಂದೇ ಇದೆಂತಾ ಘೋರ! ಇಬ್ಬರು ಮಕ್ಕಳಿಗೆ ವಿಷವಿಕ್ಕಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ
ತನ್ನಿಬ್ಬರು ಮಕ್ಕಳಿಗೆ ವಿಷವಿಕ್ಕಿದ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದೆ.

ಮಂಡ್ಯ: ತನ್ನಿಬ್ಬರು ಮಕ್ಕಳಿಗೆ ವಿಷವಿಕ್ಕಿದ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದೆ.ಕುಟುಂಬ ಕಲಹದ ಕಾರಣ ಈ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದ್ದು ಪ್ರಕರಣದಲ್ಲಿ ಪುನೀತ್(2)ಎಂಬ ಬಾಲಕ ಸಾವನ್ನಪ್ಪಿದ್ದಾನೆ.
ಮಳವಳ್ಳಿಯ ದಳವಾಯಿ ಕೋಡಿಹಳ್ಳಿಯಲ್ಲಿ ನಡೆದ ಘಟನೆಯಲ್ಲಿ ತಾಯಿ ಸೌಜನ್ಯ(24) ಹಾಗೂ ಪುತ್ರ ಲೋಹಿತ್ (1) ಸ್ಥಿತಿ ಗಂಭೀರವಾಗಿದ್ದು ಅವರನ್ನು ಮಿಮ್ಸ್‌ನಲ್ಲಿ ದಾಕಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಗ್ರಾಮದ ಶಿವಪ್ಪ ಹಾಗೂ ಸೌಜನ್ಯ ಕಳೆದ ಆರು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು.ಆದರೆ ಸೌಜನ್ಯಗೆ ತನ್ನ ಅತ್ತೆ ತನ್ನ ಮಕ್ಕಳೊಡನೆ ಮಾತನಾಡುವುದು, ಆಟವಾಡುವುದು ಇಷ್ಟವಿರಲಿಲ್ಲ. ಇದಕ್ಕಾಗಿ ಅತ್ತೆ-ಸೊಸೆ ನಡುವೆ ಆಗಾಗ ಜಗಳವಾಗುತ್ತಿತ್ತು.ಬುಧವಾರ ಸಹ ಅದೇ ಕಾರಣದಿಂಡ ಜಗಳವಾಗಿದ್ದು ಸೌಜನ್ಯ ಆಕ್ರೋಶಗೊಂಡು ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿಷ ಕುಡಿದು ಒದ್ದಾಡುತ್ತಿದ್ದ ಮೂವರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಸಹ ಒಂದು ಮಗು ಚಿಕಿತ್ಸೆ ಫಲಿಸದೆ ಅಸುನೀಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


