ಹನಿಟ್ರ್ಯಾಪ್ಗೆ ಬಿದ್ದ ಅರ್ಚಕನಿಗೆ ಪಂಗನಾಮ, ಆರೋಪಿಗಳು ಪೊಲೀಸ್ ಬಲೆಗೆ
ಸದ್ಯ ಹನಿಟ್ರ್ಯಾಪ್ಗೆ ಬೀಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂತಹದೇ ಒಂದು ಪ್ರಕರಣ ಈಗ ಚಾಮರಾಜನಗರ ಜಿಲ್ಲೆಯಲ್ಲಿಬೆಳಕಿಗೆ ಬಂದಿದೆ. ಹನಿಟ್ರ್ಯಾಪ್ ಹೆಸರಿನಲ್ಲಿ ಅರ್ಚಕನಿಂದ ಆರೋಪಿಗಳು ಲಕ್ಷ-ಲಕ್ಷ ಪೀಕಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಚಾಮರಾಜನಗರ: ಹನಿಟ್ರ್ಯಾಪ್ ಬಲೆಗೆ ಬಿದ್ದು ಅರ್ಚಕನೊಬ್ಬ ಬರೋಬ್ಬರಿ 18 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಅರ್ಚಕ ಹಣ ಕಳೆದುಕೊಂಡಿದ್ದು, ಈ ಸಂಬಂಧ ಬೆಂಗಳೂರಿನ ಹೆಸರಘಟ್ಟ ನಿವಾಸಿಗಳಾದ ಸರೋಜಮ್ಮ, ಬಸವರಾಜು, ನಾಗರತ್ನಮ್ಮ ಎಂಬುವವರನ್ನು ಬಂಧಿಸಲಾಗಿದೆ.
ಈ ಮೂವರು ಆರೋಪಿಗಳು ಆಗಾಗ್ಗೆ ಅರ್ಚಕರು ಆದ ರಾಘವನ್ ಬಳಿ ಪೂಜೆ ಮಾಡಿಸುತ್ತಿದ್ದರು. ಜೊತೆಗೆ ಬೆಂಗಳೂರಿಗೆ ಪೂಜೆಗೆ ತೆರಳಿದ್ದ ವೇಳೆ ಬಲೆಗೆ ಬಿದ್ದ ಈತನಿಂದ ಲಕ್ಷ ಲಕ್ಷ ಪೀಕಿದ್ದಾರೆ. ನೀನು ಲೈಂಗಿಕ ಕಿರುಕುಳ ನೀಡಿದ್ದೀಯಾ, ಅಶ್ಲೀಲವಾಗಿ ಮಾತನಾಡಿದ್ದೀಯಾ ನಾವು ನಿನ್ನ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಬೆದರಿಕೆವೊಡ್ಡಿ 20 ಲಕ್ಷ ರೂ. ವಸೂಲಿ ಮಾಡಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೇ ಸುಮ್ಮನಾಗದೇ 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರಿಂದ ನ.8 ರಂದು ಅರ್ಚಕ ಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅರ್ಚಕನ ಮೂಲಕ ಆರೋಪಿಗಳನ್ನು ಮದ್ದೂರಿನಲ್ಲಿ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


