ಬಿಲ್ಡರ್ ಗಳ ಸಮಸ್ಯೆ ಪರಿಹಾರಕ್ಕೆ ಸದ್ಯದಲ್ಲೇ ಮುಖ್ಯಮಂತ್ರಿಗಳೊಂದಿಗೆ ಸಭೆ: ಎಸ್ ಆರ್ ವಿಶ್ವನಾಥ್
ದುರ್ಬಲ ಆರ್ಥಿಕ ಪರಿಸ್ಥಿತಿಯಲ್ಲಿ ಬಿಲ್ಡರ್ ಗಳು ತೀವ್ರ ತೊಂದರೆ ಎದುರಿಸುತ್ತಿದ್ದು, ರಾಷ್ಟ್ರ ನಿರ್ಮಾಣಕ್ಕೆ ಸಾಕಷ್ಟು ಕೊಡುಗೆ ನೀಡುತ್ತಿರುವ ಬಿಲ್ಡರ್ ಗಳ ಸಮಸ್ಯೆಗಳನ್ನು ರಾಜ್ಯ ಸರಕಾರ ಬಗೆಹರಿಸಲಿದೆ...

ಬೆಂಗಳೂರು: ದುರ್ಬಲ ಆರ್ಥಿಕ ಪರಿಸ್ಥಿತಿಯಲ್ಲಿ ಬಿಲ್ಡರ್ ಗಳು ತೀವ್ರ ತೊಂದರೆ ಎದುರಿಸುತ್ತಿದ್ದು, ರಾಷ್ಟ್ರ ನಿರ್ಮಾಣಕ್ಕೆ ಸಾಕಷ್ಟು ಕೊಡುಗೆ ನೀಡುತ್ತಿರುವ ಬಿಲ್ಡರ್ ಗಳ ಸಮಸ್ಯೆಗಳನ್ನು ರಾಜ್ಯ ಸರಕಾರ ಬಗೆಹರಿಸಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್* ಭರವಸೆ ನೀಡಿದ್ದಾರೆ.
ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿಶ್ವನಾಥ್ ಅವರು, ದೇಶದಲ್ಲಿ ನೋಟು ಅಮಾನ್ಯೀಕರಣದ ನಂತರ ಆಗಿರುವ ಆರ್ಥಿಕ ಬೆಳವಣಿಗೆಗಳ ಹಿನ್ನಲೆಯಲ್ಲಿ ಬಿಲ್ಡರ್ ಗಳು ತಾವು ನಿರ್ಮಿಸಿದ ಫ್ಲಾಟ್ ಗಳು ಮಾರಾಟವಾಗದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದರಲ್ಲಿ ಮಧ್ಯಮ ಗಾತ್ರದ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಇವರಿಗೆ ಇರುವ ತೊಂದರೆಗಳು, ರಾಜ್ಯ ಸರಕಾರದಿಂದ ಆಗಬಹುದಾದ ಹಲವಾರು ಅನುಕೂಲಗಳ ಬಗ್ಗೆ ಚರ್ಚೆ ನಡೆಸಲು ಸದ್ಯದಲ್ಲೇ ಮುಖ್ಯಮಂತ್ರಿಗಳ ಜೊತೆ ಸಭೆಗೆ ವ್ಯವಸ್ಥೆ ಮಾಡುವುದಾಗಿ ಹೇಳಿದರು.
ನಗರದ ಮೂಲಭೂತ ಸೌಕರ್ಯಗಳ ಹೆಚ್ಚಳಕ್ಕೆ ಯಡಿಯೂರಪ್ಪ ಅವರು ಬಹಳಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಈಗಾಗಲೇ ಹಲವಾರು ಯೋಜನೆಗಳನ್ನು ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆಗಳ ಅನುಷ್ಠಾನದ ನಂತರ ನಗರ ಮತ್ತಷ್ಟು ಸುಂದರವಾಗಲಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ಬಿಲ್ಡರ್ಸ್ ಗಳ ಅಗತ್ಯತೆ ಬಹಳಷ್ಟಿದೆ. ಇದನ್ನು ಮನಗೊಂಡು ಈ ಕ್ಷೇತ್ರದಲ್ಲಿ ಆರ್ಥಿಕ ಚಟುವಟಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ವಿಶ್ವನಾಥ್ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


