ಬೆಂಗಳೂರು: ಜಿಕೆವಿಕೆ ಸಂಶೋಧನಾ ವಿದ್ಯಾರ್ಥಿನಿ ಆತ್ಮಹತ್ಯೆ
ಗೆಳೆಯನೊಂದಿಗೆ ಸಹಜೀವನ ನಡೆಸುತ್ತಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಜಿಕೆವಿಕೆ) ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಬೆಂಗಳೂರು: ಗೆಳೆಯನೊಂದಿಗೆ ಸಹಜೀವನ ನಡೆಸುತ್ತಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಜಿಕೆವಿಕೆ) ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಪ್ರಸನ್ನ ತ್ರಿಪಾಠಿ (25) ಆತ್ಮಹತ್ಯೆಗೆ ಶರಣಾದವರು.
ಅವರು ಜಿಕೆವಿಕೆಯಲ್ಲಿ ಡಾಕ್ಟರೇಟ್ ಸಂಶೋಧನಾ ವಿದ್ಯಾರ್ಥಿಯಾಗಿದ್ದರು. ಕೊಡಿಗೆಹಳ್ಳಿಯ ಕೆನರಾ ಬ್ಯಾಂಕ್‌ಲೇಔಟ್‌ನ ಮಾರುತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ಸಹಪಾಠಿ ತಮಿಳುನಾಡಿನ ಡಾಕ್ಟರೇಟ್ ವಿದ್ಯಾರ್ಥಿಯೊಂದಿಗೆ ಒಟ್ಟಾಗಿ ನೆಲೆಸಿದ್ದರು. ಗೆಳೆಯ ಮೂರು ದಿನಗಳ ಹಿಂದೆ ಊರಿಗೆ ಹೋಗಿದ್ದರು.
ಕಾಲೇಜಿಗೆ ರಜೆ ಇದ್ದ ಕಾರಣ ಮನೆಯಲ್ಲೇ ಉಳಿದಿದ್ದ ಪ್ರಸನ್ನ ರಾತ್ರಿ ಹತ್ತು ಗಂಟೆ ಸುಮಾರಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಹಜೀವನ ನಡೆಸುತ್ತಿದ್ದ ಗೆಳೆಯನೊಂದಿಗಿನ ಮನಸ್ತಾಪವೇ ಣಿ ಘಟನೆಗೆ ಕಾರಣವೆಂದು ಶಂಕೆ ವ್ಯಕ್ತವಾಗಿದೆ.
ಆತ್ಮಹತ್ಯೆಗೆ ಮುನ್ನ ಪ್ರಸನ್ನ ಅವರು ಡೆತ್ ನೋಟ್ ಬರೆದಿದ್ದು "ನನ್ನ ಸಾವಿಗೆ ಯಾರೂ ಕಾರಣವಲ್ಲ!" ಎಂದು ಉಲ್ಲೇಖಿಸಿದ್ದಾರೆ. ಇದೀಗ ಆಕೆಯ ಗೆಳೆಯ ತಮಿಳುನಾಡು ಮೂಲದ ವಿದ್ಯಾರ್ಥಿಯನ್ನು ಕರೆಸಿ ಪೋಲೀಸರು ವಿಚಾರಣೆ ಪ್ರಾರಂಭಿಸಿದ್ದಾರೆ. ಕೋಡಿಗೆಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


