ರಾಜ್ಯ

ಚಿತ್ರದುರ್ಗ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಟನ್ ಅನ್ನಭಾಗ್ಯ ಅಕ್ಕಿ ವಶ

ಅನ್ನಭಾಗ್ಯ ಅಕ್ಕಿ ಗೋಡಾನ್‌ ಮೇಲೆ ರಾಂಪುರ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ್ದ ಭಾರಿ ಪ್ರಮಾಣದ ಅಕ್ರಮ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಚಿತ್ರದುರ್ಗ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಟನ್ ಅನ್ನಭಾಗ್ಯ ಅಕ್ಕಿ ವಶ
ಸಂಗ್ರಹ ಚಿತ್ರ
Published On :

ಚಿತ್ರದುರ್ಗ: ಅನ್ನಭಾಗ್ಯ ಅಕ್ಕಿ ಗೋಡಾನ್‌ ಮೇಲೆ ರಾಂಪುರ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ್ದ ಭಾರಿ ಪ್ರಮಾಣದ ಅಕ್ರಮ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ಪಡಿತರ ಅಕ್ಕಿ ಹಾಗೂ ಶಾಲಾ ಬಿಸಿಯೂಟದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಮೊಳಕಾಲ್ಮೂರು ತಹಶೀಲ್ದಾರ್ ಬಸವರಾಜ್ ಹಾಗೂ ಪಿಎಸ್ಐ ಗುಡ್ಡಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಸುಮಾರು 60 ಟನ್ ನಷ್ಟು ಅಕ್ರಮ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಿದಾನಂದಪ್ಪ, ಸಣ್ಣ ಮಾರಣ್ಣ ಸೇರಿ ಐವರ ವಿರುದ್ಧ ಎಫ್‌ಐ ಆರ್ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.