ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 18.74 ಲಕ್ಷ ಮೌಲ್ಯದ ಚಿನ್ನ ವಶ, ಓರ್ವನ ಸೆರೆ
ದುಬೈನಿಂದ ಮಗಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 483.57 ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಓರ್ವನನ್ನು ಬಂಧಿಸಿದ್ದಾರೆ

ಮಂಗಳೂರು: ದುಬೈನಿಂದ ಮಗಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 483.57 ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಓರ್ವನನ್ನು ಬಂಧಿಸಿದ್ದಾರೆ.
ದುಬೈನಿಂದ ಏರ್ ಇಂಡಿಯಾ ವಿಮಾನವು ಮಂಗಳೂರಿಗೆ ಆಗಮಿಸಿದಾಗ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರ ತಪಾಸಣೆ ನಡೆಸಿದ್ದಾರೆ. ಈ ವೇಳೆ ಇಪ್ಪತ್ತನಾಲ್ಕು ಕ್ಯಾರೆಟ್ ಶುದ್ದತೆಯ 18.74 ಲಕ್ಷ ಮೌಲ್ಯದ ಬಂಗಾರ ಪತ್ತೆಯಾಗಿದೆ. ಪ್ರಯಾಣಿಕನ ಸೋಗಿನಲ್ಲಿದ್ದ ಆರೋಪಿ ಇದನ್ನು ಪೇಸ್ಟ್ ರೂಪದಲ್ಲಿ ಮೂರು ಪ್ಯಾಕೆಟ್ ಗಳಲ್ಲಿ ತನ್ನ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಅಧಿಕಾರಿಗಳೆದುರು ವ್ಯಕ್ತಿ ತಾನು ಅಕ್ರಮ ಚಿನ್ನ ಸಾಗಾಟದಲ್ಲಿ ತೊಡಗಿದ್ದನ್ನು ಒಪ್ಪಿಕೊಂಡಿದ್ದಾಗಿ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


