ಚಿಕ್ಕಮಗಳೂರು: ಮುಸ್ಲಿಮರ ಫೋಟೋ ಹಾಕದ್ದಕ್ಕೆ ಕೈ-ಕೈ ಮಿಲಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಆಗಮನದ ಬೆನ್ನಲ್ಲೇ ಚಿಕ್ಕಮಗಳೂರಿನ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ.

ಚಿಕ್ಕಮಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಆಗಮನದ ಬೆನ್ನಲ್ಲೇ ಚಿಕ್ಕಮಗಳೂರಿನ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಕೊರಳಪಟ್ಟಿ ಹಿಡಿದು ಕಾಂಗ್ರೆಸ್ ಮುಖಂಡರು ಒಬ್ಬರನ್ನೊಬ್ಬರು ತಳ್ಳಾಡಿಕೊಂಡಿದ್ದಾರೆ.
ಬ್ಯಾನರ್ ನಲ್ಲಿ ಮುಸ್ಲಿಂ ಮುಖಂಡರ ಫೋಟೋ ಹಾಕದ ವಿಷಯಕ್ಕೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೊರಳಪಟ್ಟಿ ಹೊಡೆದಾಡಿದ ಘಟನೆ ಮಂಗಳವಾರ ವರದಿಯಾಗಿದೆ.
ನಗರದ ಹನುಮಂತಪ್ಪ ಸರ್ಕಲ್ನಲ್ಲಿ ಈ ಘಟನೆ ನಡೆದಿದ್ದು, ಬ್ಯಾನರ್‌ನಲ್ಲಿ ಮುಸ್ಲಿಂ ಮುಖಂಡರ ಫೋಟೋ ಹಾಕದಿದ್ದಕ್ಕೆ , ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಆಕ್ರೋಶಗೊಂಡಿದ್ದಾರೆ. ಕಾಂಗ್ರೆಸ್ ಮುಖಂಡ ರಾಹಿಲ್ ಅಕ್ಮಲ್ ಅಸಮಾಧಾನ ಹೊರಹಾಕಿದ್ದು, ನಡುರಸ್ತೆಯಲ್ಲೇ ಕೊರಳಪಟ್ಟಿ ಹಿಡಿದು ಜಗಳವಾಡಿದ್ದಾರೆ.
ಮುಸ್ಲಿಮರ ವೋಟ್ ಬೇಕು ಮುಸ್ಲಿಂ ಮುಖಂಡರ ಫೋಟೋ ಬೇಡ ಎಂದು ರಾಹಿಲ್ ಅಸಮಾಧಾನ ಹೊರಹಾಕಿದ್ದು, ನಡುರಸ್ತೆಯಲ್ಲೇ ಜಗಳಕ್ಕೆ ಬಿದ್ದಿದ್ದಾರೆ. ಈ ಕಾರಣಕ್ಕೆ ಹನುಮಂತಪ್ಪ ಸರ್ಕಲ್‌ನಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


