ರಾಜ್ಯ

ಮಂಡ್ಯ: ಹಾರದಲ್ಲಿದ್ದ ಸೇಬಿಗಾಗಿ ಕಾರ್ಯಕರ ಕಿತ್ತಾಟ, ಲಘು ಲಾಠಿ ಪ್ರಹಾರ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರಕ್ಕಾಗಿ ತಾಲೂಕಿನ ಕಿಕ್ಕೇರಿ ಗ್ರಾಮಕ್ಕೆ ಆಗಮಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬೃಹತ್ ಸೇಬಿನ ಹಾರ ಹಾಕುವ ಮೂಲಕ ಸ್ವಾಗತಿಸಲಾಯಿತು.

ಮಂಡ್ಯ: ಹಾರದಲ್ಲಿದ್ದ ಸೇಬಿಗಾಗಿ ಕಾರ್ಯಕರ ಕಿತ್ತಾಟ, ಲಘು ಲಾಠಿ ಪ್ರಹಾರ
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Published On :

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರಕ್ಕಾಗಿ ತಾಲೂಕಿನ ಕಿಕ್ಕೇರಿ ಗ್ರಾಮಕ್ಕೆ ಆಗಮಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬೃಹತ್ ಸೇಬಿನ ಹಾರ ಹಾಕುವ ಮೂಲಕ ಸ್ವಾಗತಿಸಲಾಯಿತು. 

ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ ಬಳಿಕ ಹಾರದಲ್ಲಿದ್ದ ಸೇಬಿನ ಹಣ್ಣಿಗಾಗಿ ಕಾಂಗ್ರೆಸ್ ಕಾರ್ಯಕರ್ತರು ಮುಗಿಬಿದ್ದು, ಕಿತ್ತಾಡಿಕೊಂಡ ಘಟನೆ ನಡೆಯಿತು. 

ಇದುವರೆಗೂ ಸೇಬು ಹಣ್ಣು ನೋಡಿರದ ಹಾಗೆ ಕಾರ್ಯಕರ್ತರು ಒಬ್ಬರ ಮೇಲೋಬ್ಬರು ಬಿದ್ದು, ಹಣ್ಣುಗಳನ್ನು ಕೀಳುತ್ತಿದ್ದರು. 

ಹಾರ ಹಿಡಿದು ಕಿತ್ತಾಡುತ್ತಿದ್ದಂತೆ ಜೆಸಿಬಿಯಿಂದ ಬೃಹತ್ ಗ್ರಾತ್ರದ ಸೇಬಿನ‌ ಹಾರ ಕೆಳಗೆ ಬಿದ್ದಿದ್ದು, ನುಕುನುಗ್ಗಲು ಆರಂಭವಾಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಕಾರ್ಯಕರ್ತರನ್ನು ಚದುರಿಸಿದರು.

- ನಾಗಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.