ಮಂಡ್ಯ: ವ್ಯಕ್ತಿ ಬಲಿ ಪಡೆದ ನಕಲಿ ವೈದ್ಯ!
ಯಕಶ್ಚಿತ್ ಜ್ವರಕ್ಕೆ ನಕಲಿ ವೈದ್ಯ ನೀಡಿದ ಇಂಜೆಕ್ಷನ್ ನಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ದಡಮಹಳ್ಳಿಯಲ್ಲಿ ನಡೆದಿದೆ.

ಮಂಡ್ಯ: ಯಕಶ್ಚಿತ್ ಜ್ವರಕ್ಕೆ ನಕಲಿ ವೈದ್ಯ ನೀಡಿದ ಇಂಜೆಕ್ಷನ್ ನಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ದಡಮಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಮಳವಳ್ಳಿ ತಾಲೂಕಿನ ದಡಮಹಳ್ಳಿಯ ಶಿವಲಿಂಗೇಗೌಡ(58) ಎಂದು ಗುರುತಿಸಲಾಗಿದ್ದು, ಆರ್ ಎಂಪಿ ವೈದ್ಯ ಕೃಷ್ಣಮೂರ್ತಿಯಿಂದ ಪಡೆದ ಇಂಜೆಕ್ಷನ್ ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರು ಮೂಲದ ಕೃಷ್ಣಮೂರ್ತಿ ಅವರು ಕಳೆದ 20 ವರ್ಷಗಳಿಂದ ತೊರೆಕಾಡನಹಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಶಿವಲಿಂಗೇಗೌಡ ಅವರು ಸೋಮವಾರ ಕೃಷ್ಣಮೂರ್ತಿ ಕ್ಲಿನಿಕ್ ಗೆ ತೆರಳ ಇಂಜೆಕ್ಷನ್ ಪಡೆದಿದ್ದರು. ಇಂಜೆಕ್ಷನ್ ಪಡೆದ ಬಳಿಕ ಅವರ ಸೊಂಟದಲ್ಲಿ ಊತ ಕಾಣಿಸಿಕೊಂಡಿತ್ತು. ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


