ರಾಜ್ಯ

ಬೆಂಗಳೂರು: ರೌಡಿ ಕಾರ್ತಿಕ್ ಗೂಂಡಾ ಕಾಯ್ದೆಯಡಿ ಬಂಧನ

ಉಪ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ನಗರ ಪೊಲೀಸರು, ಮತ್ತೊಬ್ಬ ರೌಡಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ಬೆಂಗಳೂರು: ರೌಡಿ ಕಾರ್ತಿಕ್ ಗೂಂಡಾ ಕಾಯ್ದೆಯಡಿ ಬಂಧನ
ರೌಡಿ ಕಾರ್ತಿಕ್
Published On :

ಬೆಂಗಳೂರು: ಉಪ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ನಗರ ಪೊಲೀಸರು, ಮತ್ತೊಬ್ಬ ರೌಡಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ಹಲಸೂರಿನ ಗೌತಮ್‌ಪುರದ ನಿವಾಸಿ, ರೌಡಿ ಕಾರ್ತಿಕ್ ಅಲಿಯಾಸ್ ರಾಹುಲ್ (29)ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಡಿಸಿಪಿ ಡಾ. ಎಸ್.ಟಿ. ಶರಣಪ್ಪ ತಿಳಿಸಿದ್ದಾರೆ.

ಕಾರ್ತಿಕ್, ಹಲಸೂರು ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದು, ಕೊಲೆಯತ್ನ, ಅತ್ಯಾಚಾರ, ಸುಲಿಗೆ, ದೊಂಬಿ ಇನ್ನಿತರ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಅತ್ಯಾಚಾರ ಪ್ರಕರಣದಲ್ಲಿ ಈತನಿಗೆ ನ್ಯಾಯಾಲಯವು 7 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದರೂ ರೌಡಿ ಚಟುವಟಿಕೆಗಳಲ್ಲಿ ತೊಡಗಿ ಸ್ಥಳೀಯರ ನೆಮ್ಮದಿಗೆ ಭಂಗವುಂಟು ಮಾಡಿದ್ದ. ರೌಡಿ ಕಾರ್ತಿಕ್‌ನನ್ನು ಹಲವು ಬಾರಿ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಂಡಿದ್ದರೂ ಮತ್ತೆ ಮತ್ತೆ ರೌಡಿ ಚಟುವಟಿಕೆಗಳಲ್ಲಿ ತೊಡಗಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.