ಕಲಬುರಗಿ ವಿಮಾನ ನಿಲ್ದಾಣ ಸರಕು ಸಾಗಾಣಿಕೆಗೂ ಬಳಸುವಂತೆ ಕೇಂದ್ರಕ್ಕೆ ಮನವಿ: ಸಿಎಂ ಯಡಿಯೂರಪ್ಪ
ಬಹುದಿನಗಳ ಬೇಡಿಕೆಯಾದ ಕಲಬುರಗಿ ವಿಮಾನ ನಿಲ್ದಾಣದ ಕನಸು ಸಾಕಾರಗೊಂಡಿದ್ದು, ಭವಿಷ್ಯದಲ್ಲಿ ಈ ವಿಮಾನ ನಿಲ್ದಾಣವನ್ನು ಸರಕು ಸಾಗಾಣಿಕೆಗೂ ಬಳಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

ಕಲಬುರಗಿ: ಬಹುದಿನಗಳ ಬೇಡಿಕೆಯಾದ ಕಲಬುರಗಿ ವಿಮಾನ ನಿಲ್ದಾಣದ ಕನಸು ಸಾಕಾರಗೊಂಡಿದ್ದು, ಭವಿಷ್ಯದಲ್ಲಿ ಈ ವಿಮಾನ ನಿಲ್ದಾಣವನ್ನು ಸರಕು ಸಾಗಾಣಿಕೆಗೂ ಬಳಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ಈ ವಿಮಾನ ನಿಲ್ದಾಣ ಪ್ರಯಾಣಿಕರ ಸಾಗಾಟಕ್ಕೆ ಮಾತ್ರ ಬಳಕೆಯಾದರೆ ಸಾಲದು. ಬದಲಿಗೆ ವಾಣಿಜ್ಯ ಉದ್ದೇಶಕ್ಕೂ ಬಳಕೆಯಾಗಬೇಕು. ಒಟ್ಟು 3.175 ಕಿ.ಮಿ. ಉದ್ದದ ರನ್ ವೇ ಹೊಂದಿರುವ ಕಲಬುರಗಿ ವಿಮಾನ ನಿಲ್ದಾಣ ರಾಜ್ಯದ 2ನೇ ಹಾಗೂ ದೇಶದ 10ನೇ ಅತಿ ಉದ್ದದ ರನ್ ವೇ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂತಹ ವಿಮಾನ ಸರ್ವ ರೀತಿಯಲ್ಲೂ ಸದ್ಬಳಕೆಯಾಗಬೇಕು ಎಂದರು.
ದೇಶಕ್ಕೆ ಅಗತ್ಯವಾಗಿರುವ ಶೇ.30 ರಷ್ಟು ತೊಗರಿ ಉತ್ಪಾದಿಸುವ ಮತ್ತು ಸಿಮೆಂಟ್ ರಫ್ತಿನಿಂದ ಕಲಬುರಗಿ ಜಿಲ್ಲೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಹೀಗಾಗಿ ಇಲ್ಲಿನ ವಿಮಾನ ನಿಲ್ದಾಣವನ್ನು ಭವಿಷ್ಯದಲ್ಲಿ ಸರಕು ಸಾಗಣೆಗೂ ಬಳಸಿಕೊಳ್ಳುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ವೈ ಜೊತೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್, ಸಂಸದ ಉಮೇಶ್ ಜಾಧವ್ ಮತ್ತಿತರರು ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


