ಶಾಸನಕ ಪುತ್ರ ಎಂದು ಹೇಳಿಕೊಂಡು ಒಂಟಿ ಮಹಿಳೆಯರ ಮೇಲೆ ಅತ್ಯಾಚಾರ, ಲೂಟಿ: ಆರೋಪಿ ಬಂಧನ
ಶಾಸಕನ ಪುತ್ರನೆಂದು ಹೇಳಿಕೊಂಡು ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರನ್ನು ಅಪಹರಿಸಿ ಅತ್ಯಾಚಾರವೆಸಗಿ, ಚಿನ್ನಾಭರಣ ದೋಚುತ್ತಿದ್ದ ಕುಖ್ಯಾತ ಕಾಮುಕನನ್ನು ಹಲಸೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬೆಂಗಳೂರು: ಶಾಸಕನ ಪುತ್ರನೆಂದು ಹೇಳಿಕೊಂಡು ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರನ್ನು ಅಪಹರಿಸಿ ಅತ್ಯಾಚಾರವೆಸಗಿ, ಚಿನ್ನಾಭರಣ ದೋಚುತ್ತಿದ್ದ ಕುಖ್ಯಾತ ಕಾಮುಕನನ್ನು ಹಲಸೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ತಮಿಳುನಾಡಿನ ತಿರುಚಿಯ ಶ್ರೀರಂಗಂನ ನಿವಾಸಿ ಜಹಂಗೀರ್(30) ಬಂಧಿತ ಎಂಬಿಎ ಪದವೀಧರ. ಈತನಿಂದ ಕೃತ್ಯಕ್ಕೆ ಬಳಸುತ್ತಿದ್ದ ಸ್ಕೋಡಾ ಕಾರು, ಮೊಬೈಲ್, ಹ್ಯಾಂಡ್ ಬ್ಯಾಗ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೂರ್ವವಿಭಾಗದ ಡಿಸಿಪಿ ಡಾ. ಎಸ್.ಟಿ. ಶರಣಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಐಷಾರಾಮಿ ಕಾರಿನಲ್ಲಿ ಶ್ರೀಮಂತರ ವೇಷಭೂಷಣದೊಂದಿಗೆ ಬರುವ ಆರೋಪಿ, ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಈ ಕೃತ್ಯವೆಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಜಹಂಗೀರ್ 2017ರಿಂದ ಮಹಿಳೆಯರಿಗೆ ವಂಚಿಸುತ್ತಿದ್ದಾನೆ. ಈವೆರೆಗೆ ಈತನ ವಿರುದ್ಧ ಐದು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಮಾಡೆಲಿಂಗ್ ಮತ್ತು ನಟಿಯನ್ನಾಗಿ ಮಾಡಿಸುತ್ತೇನೆಂದು ಸುಲಿಗೆ ಮತ್ತು ಲೈಂಗಿಕ ಕೃತ್ಯಕ್ಕೆ ಬಳಸಿಕೊಂಡಿದ್ದಾನೆ. ಅಲ್ಲದೆ, ಡ್ರಾಪ್ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮೀಡಿಯಾ ಮತ್ತು ಅಡ್ವಟೈಸ್ ಕಂಪನಿಯಲ್ಲಿ ದೊಡ್ಡ ಹುದ್ದೆ ಕೊಡಿಸುತ್ತೇನೆಂದು ಹೇಳಿ ವಂಚಿಸಿರುವುದಾಗಿ ಮಹಿಳೆಯರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


