ಕಲಬುರಗಿ: ಬಂಡಾಯ ಸಾಹಿತಿ ಚನ್ನಣ್ಣ ವಾಲೀಕಾರ ನಿಧನ
ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾಣ ಕರ್ನಾಟಕ ನಾಡಿನ ಬಂಡಾಯ ಸಾಹಿತಿ ಡಾ. ಚನ್ನಣ್ಣ ವಾಲೀಕಾರ(78) ಅವರು ಭಾನುವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಲಬುರಗಿ: ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾಣ ಕರ್ನಾಟಕ ನಾಡಿನ ಬಂಡಾಯ ಸಾಹಿತಿ ಡಾ. ಚನ್ನಣ್ಣ ವಾಲೀಕಾರ(78) ಅವರು ಭಾನುವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಾಲೀಕಾರ ಅವರು ಎರಡು ವರ್ಷದ ಹಿಂದೆ ಲಿವರ್ ಕ್ಯಾನ್ಸರ್ ಆಗಿತ್ತು. ಅಂದಿನಿಂದ ಅವರು ನಿರಂತರ ಚಿಕಿತ್ಸೆಯಲ್ಲಿದ್ದರು. ಒಂದು ವರ್ಷದಿಂದ ಅವರ ಆರೋಗ್ಯ ಕ್ಷೀಣಿಸುತ್ತ ಸಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
1943ರ ಏಪ್ರಿಲ್ 6ರಂದು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಶಂಕರವಾಡಿ ಗ್ರಾಮದಲ್ಲಿ ಅವರು ಜನಿಸಿದ ಅವರು, ಪ್ರೌಢಶಾಲೆ ಶಿಕ್ಷಕರಾಗಿ, ಕಾಲೇಜು ಉಪನ್ಯಾಸಕರಾಗಿ, ಗುಲಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರವಾಚಕರಾಗಿ, ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಮುಂಬೈ, ಹೈದರಾಬಾದ್, ಹಂಪಿ, ಬೆಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗದಲ್ಲಿ ಇರುವ ವಿಶ್ವವಿದ್ಯಾಲಯಗಳಲ್ಲಿಯೂ ಗ್ರಂಥಾಲಯ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದಾರೆ. ಹೀಗಾಗಿ ರಾಜ್ಯದ ಮೂಲೆಮೂಲೆಯಲ್ಲೂ ಅವರ ಶಿಷ್ಯಬಳಗ, ಓದುಗ ಅಭಿಮಾನಿಗಳು ಇದ್ದಾರೆ.
ಚನ್ನಣ್ಣ ವಾಲೀಕಾರ ಅವರು ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಹತ್ತಾರು ಪ್ರಬಂಧಗಳು, ನಾಲ್ಕು ಮಹಾಕಾವ್ಯಗಳು, 11 ಕವನ ಸಂಕನಲಗಳು, 12 ನಾಟಕಗಳು, 4 ಜನಪದ ಸಂಪ್ರಬಂಧಗಳು, 5 ಕಾದಂಬರಿಗಳು, ಬೆಳ್ಯಾ ಎಂಬ ಅದ್ವಿತೀಯ ಕಾದಂಬರಿ ಮೂಲಕ ಕನ್ನಡ ಸಾಹಿತ್ಯಲೋಕವನ್ನು ಬೆಚ್ಚಿಬೀಳಿಸಿದ್ದ ಅವರು, ವ್ಯೋಮಾವ್ಯೋಮ ಮಹಾಕಾವ್ಯದ ಮೂಲಕ ಅವರು ಮನೆಮಾತಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


